Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್

ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ

ಯಾದಗಿರಿ ಜಿಲ್ಲೆಯಲ್ಲಿ ಅನಕ್ಷರತೆ, ಬಡತನ, ಅತಿ ಕಡಿಮೆ ತಲಾ ಆದಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಬ್ಬಿನ ಬಿಲ್ ಪಾವತಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ
(ರಾಜ್ಯ ) ಜಿಲ್ಲೆ

ಕಬ್ಬಿನ ಬಿಲ್ ಪಾವತಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ನಗರದ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕೃಷ್ಣಾ ತೀರ ಹೋರಾಟ ಸಮಿತಿ ವತಿಯಿಂದ 2025-26ನೇ ಸಾಲಿನ ಕಬ್ಬಿನ ಬಿಲ್ ಪಾವತಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ.
ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡ ಚೂನ್ನಪ್ಪ ಪೂಜಾರಿ ಮಾತನಾಡಿ, ಕಬ್ಬು ಬೆಳೆಗಾರರಿಗೆ ಕಾನೂನು ಪ್ರಕಾರ 14 ದಿನಗಳಲ್ಲಿ ಬಾಕಿ ಹಣ ಪಾವತಿಸಬೇಕಿದ್ದರೂ 3 ರಿಂದ 4 ತಿಂಗಳು ಕಳೆದರೂ ಹಣ ನೀಡದೇ ರೈತರನ್ನು ಸಂಕಷ್ಟಕ್ಕೆ ತಳ್ಳಲಾಗಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಸುಮಾರು 3,500 ಕೋಟಿ ಕಬ್ಬಿನ ಬಿಲ್ಲು ಬಾಕಿ ಉಳಿದಿದ್ದು ಬಾಗಲಕೋಟೆ, ವಿಜಯಪುರ, ಬೆಳಗಾವಿ ಜಿಲ್ಲೆಗಳ ರೈತರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ ಎಂದರು. ಸರ್ಕಾರ ಹಾಗೂ ಅಧಿಕಾರಿಗಳು ರೈತರ ಸಮಸ್ಯೆ ಕಡೆ ನಿರ್ಲಕ್ಷ್ಯ ವಹಿಸಿರುವುದನ್ನು ಟೀಕಿಸಿದ ಅವರು, ಚುನಾವಣೆ ಸಮಯದಲ್ಲಿ ಮಾತ್ರ ರಾಜಕೀಯ ನಾಯಕರು ರೈತರ ಬಳಿ ಬರುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಾಕಿ ಹಣವನ್ನು ತಕ್ಷಣ ಪಾವತಿಸದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ನ್ಯಾಯವಾದಿ ಯಲ್ಲಪ್ಪ ಹೆಗಡೆ ಮಾತನಾಡಿ, ಕಬ್ಬಿನ ಬಾಕಿ ಸಮಸ್ಯೆಯ ಜೊತೆಗೆ ಕೆಲವು ಖಾಸಗಿ ಸಕ್ಕರೆ ಕಾರ್ಖಾನೆಗಳು ತೂಕದಲ್ಲಿ ಮೋಸ ಮಾಡುತ್ತಿರುವುದನ್ನು ಗಂಭೀರವಾಗಿ ಉಲ್ಲೇಖಿಸಿದರು. ತೂಕದ ಯಂತ್ರಗಳನ್ನು ಅಳವಡಿಸುವ ಕುರಿತು ಸರ್ಕಾರ ನೀಡಿದ ಭರವಸೆ ಇನ್ನೂ ಜಾರಿಗೆ ಬಂದಿಲ್ಲ ಎಂದು ಟೀಕಿಸಿದರು.
ರೈತ ಮುಖಂಡ ರಾಜು ನದಾಫ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಾರ್ಖಾನೆ ಮಾಲೀಕರ ಮೇಲೆ ಒತ್ತಡ ಹೇರಿ ರೈತರ ಬಾಕಿ ಪಾವತಿಸದಿದ್ದರೆ ಮುಖ್ಯಮಂತ್ರಿ ಬಾಗಲಕೋಟೆ ಜಿಲ್ಲೆಗೆ ಪ್ರವೇಶಿಸಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.
ಗುಡುಸಾಬ ನದಾಫ್ ಮಾತನಾಡಿದರು.
ರೈತರು ಒಗ್ಗಟ್ಟಾಗಿ ಹೋರಾಡಿದರೆ ಮಾತ್ರ ನ್ಯಾಯಸಿಗುತ್ತದೆ ಎಂದು ಮುಖಂಡರು
ಕರೆ ನೀಡಿದ್ದು, “ನಮ್ಮ ಹಕ್ಕಿನಹಣ ಸಿಗುವವರೆಗೆ ಹೋರಾಟ ನಿಲ್ಲುವುದಿಲ್ಲ” ಎಂದು ಸ್ಪಷ್ಟಪಡಿಸಿದರು.
ಮಲ್ಲಪ್ಪ ಅಂಗಡಿ, ಕಿರಣ ಕವಟಗೊಪ್ಪ, ತುಕಾರಾಮ ಮ್ಯಾಗಿನಮನಿ, ಅಜೇಯ ಕುಲಕರ್ಣಿ, ಕುಮಾರ ಪವಾರ, ಸಿದ್ದನಗೌಡ ಪಾಟೀಲ, ಶ್ರೀಶೈಲ ದೇಸಾಯಿˌ ಶಿವಲಿಂಗ ತುಬಚಿ, ಶ್ರೀಶೈಲ ಭೂಮಾರ, ಹನುಮಂತ ಮಗದುಮ, ಸಿದ್ದಪ್ಪ ಬಣಜನವರ, ಕಲ್ಲಪ್ಪ ಬಿರಾದಾರ, ಸೇರಿದಂತೆ ಸುತ್ತಲಿನ ನೂರಾರು ರೈತರು ಪ್ರತಿಭಟನೆಯಲ್ಲಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್

ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ

ಯಾದಗಿರಿ ಜಿಲ್ಲೆಯಲ್ಲಿ ಅನಕ್ಷರತೆ, ಬಡತನ, ಅತಿ ಕಡಿಮೆ ತಲಾ ಆದಾಯ

ಕೊಲ್ಹಾರದಲ್ಲಿ ಇಂದು ಸಸಿ ನೆಡುವ ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
    In (ರಾಜ್ಯ ) ಜಿಲ್ಲೆ
  • ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಯಾದಗಿರಿ ಜಿಲ್ಲೆಯಲ್ಲಿ ಅನಕ್ಷರತೆ, ಬಡತನ, ಅತಿ ಕಡಿಮೆ ತಲಾ ಆದಾಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಇಂದು ಸಸಿ ನೆಡುವ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ನಾಲ್ವಡಿ ಕೃಷ್ಣರಾಜ ಒಡೆಯರ ನವಕರ್ನಾಟಕದ ಶಿಲ್ಪಿ :ಬಂಡೆ
    In (ರಾಜ್ಯ ) ಜಿಲ್ಲೆ
  • ಸಾಮೂಹಿಕ ಹತ್ಯೆ ಪ್ರಕರಣ: ಮತ್ತೆ ಆರು ದುಷ್ಕರ್ಮಿಗಳ ಬಂಧನ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದ್ಧತೆಯ ಅವಿಶ್ರಾಂತ ಕೆಲಸಗಾರ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 04, 2026
    In ದಿನಪತ್ರಿಕೆ
  • ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ
    In ವಿಶೇಷ ಲೇಖನ
  • ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.