Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಪಘಾತ: ಸ್ಥಳದಲ್ಲೇ ಬೈಕ್ ಸವಾರರೀರ್ವರ ಸಾವು!

ಭೀಕರ ಅಪಘಾತ: ಬೆಂಕಿಯ ಕೆನ್ನಾಲಿಗೆಗೆ ಬೈಕ್ ಸವಾರ ಬಲಿ!

ಸರ್ಕಾರಿ ಆಸ್ಪತ್ರೆಗೆ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಭೇಟಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಆಸ್ಪತ್ರೆಗೆ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಭೇಟಿ
(ರಾಜ್ಯ ) ಜಿಲ್ಲೆ

ಸರ್ಕಾರಿ ಆಸ್ಪತ್ರೆಗೆ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಭೇಟಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಗರ್ಭಿಣಿ ಬಾಣಂತಿಯರೊಂದಿಗೆ ಡಾ.ನಾಗಲಕ್ಷ್ಮಿ ಚೌಧರಿ ಸಂವಾದ

ಉದಯ ರಶ್ಮಿ ದಿನಪತ್ರಿಕೆ

ಅಥಣಿ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌಧರಿ ಅವರು ಅಥಣಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲಿಸಿದರು.
ಈ ವೇಳೆ ರೋಗಿಗಳು, ಗರ್ಭಿಣಿಯರು ಹಾಗೂ ಬಾಣಂತಿಯರೊಂದಿಗೆ ಸಂವಾದ ನಡೆಸಿ ಆಸ್ಪತ್ರೆಯ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಅಥಣಿ ಸರ್ಕಾರಿ ಆಸ್ಪತ್ರೆಯು ಅತ್ಯಂತ ಸ್ವಚ್ಛವಾಗಿದ್ದು, ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ ಇಲ್ಲಿ ತಿಂಗಳಿಗೆ 300 ರಿಂದ 400 ಹೆರಿಗೆಗಳು ನಡೆಯುತ್ತಿರುವುದು ಹೆಮ್ಮೆಯ ವಿಷಯ. ರೋಗಿಗಳು ಹಾಗೂ ಸಾರ್ವಜನಿಕರು ಇಲ್ಲಿನ ವೈದ್ಯರ ಸೇವೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕುಡಿಯುವ ನೀರು ಹಾಗೂ ಬಿಸಿನೀರಿನ ವ್ಯವಸ್ಥೆ ಸಮರ್ಪಕವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಅಲ್ಲದೆ, ನೂತನವಾಗಿ ನಿರ್ಮಾಣವಾಗುತ್ತಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಾಮಗಾರಿಯನ್ನು ಶ್ಲಾಘಿಸಿದರು.
ಶೌಚಾಲಯ ದುರಸ್ತಿ: ಆಸ್ಪತ್ರೆಯ ಶೌಚಾಲಯಗಳಲ್ಲಿನ ಸಿಂಕ್‌ಗಳು ಬಂದ್ ಆಗಿದ್ದು, ಅವುಗಳನ್ನು ಕೂಡಲೇ ಸರಿಪಡಿಸುವಂತೆ ಸೂಚಿಸಿದರು.
ಔಷಧಿಗಳಲಭ್ಯತೆ: ಕೆಲವರು ಹೊರಗಿನ ಔಷಧಿ ಬರೆಯುತ್ತಿದ್ದಾರೆ ಎಂದು ದೂರಿದ್ದಾರೆ. ಅನುದಾನದ ಕೊರತೆಯಿಂದ ಕೆಲವು ಔಷಧಿಗಳ ಕೊರತೆ ಇರಬಹುದು, ಈ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಬಸಗೌಡಾ ಕಾಗೆ, ತಾಲೂಕಾ ದಂಡಾಧಿಕಾರಿ ಸಿದರಾಯ ಭೋಸಗಿ, ತಾ.ಪಂ.ಅಧಿಕಾರಿ ಶಿವಾನಂದ ಕಲ್ಲಾಪುರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ ಸೌಂದಲಗೇಕರ, ಪುರಸಭೆ ಮುಖ್ಯಾಧಿಕಾರಿ ಅಶೋಕ ಗುಡಿಮನಿ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸರ್ಕಾರಿ ಯೋಜನೆಗಳ ಮಾಹಿತಿಯ ಕೊರತೆ :ಅಸಮಾಧಾನ

ಆಸ್ಪತ್ರೆಯ ಉತ್ತಮ ಸೇವೆಯ ನಡುವೆಯೂ ಸಾರ್ವಜನಿಕರಿಗೆ ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲದಿರುವುದಕ್ಕೆ ಡಾ.ನಾಗಲಕ್ಷ್ಮಿ ಬೇಸರ ವ್ಯಕ್ತಪಡಿಸಿದರು.
ಜನರಿಗೆ ಯೋಜನೆಗಳ ಮಾಹಿತಿ ಸಿಗದಿರುವುದು ವಿಷಾದನೀಯ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮೇಲಧಿಕಾರಿಗಳಿಗೆ ಸೂಚಿಸುತ್ತೇನೆ, ಎಂದ ಅವರು, ಸ್ಥಳದಲ್ಲಿದ್ದ ತಾಲೂಕು ವೈದ್ಯಾಧಿಕಾರಿ ಡಾ. ಬಸಗೌಡ ಕಾಗೆ ಅವರಿಗೆ ಆಸ್ಪತ್ರೆಯ ಆವರಣದಲ್ಲಿ ಮಾಹಿತಿ ಫಲಕಗಳನ್ನು (ಡಿಸ್‌ಪ್ಲೇ) ಅಳವಡಿಸಲು ಸೂಚನೆ ನೀಡಿದರು.

ದುಡ್ಡು ಪಡೆಯುವ ಆರೋಪಕ್ಕೆ ಪ್ರತಿಕ್ರಿಯೆ

ಹೆರಿಗೆಗೆ ಹಣ ಪಡೆಯುತ್ತಾರೆ ಎಂಬ ಆರೋಪಗಳ ಕುರಿತು ಉತ್ತರಿಸಿದ ಡಾ.ನಾಗಲಕ್ಷ್ಮಿ ಅವರು, “ನಾನು ಅನೇಕ ಬಾಣಂತಿಯರಿಗೆ ವಿಚಾರಿಸಿದ್ದೇನೆ, ಯಾರೂ ಕೂಡ ಹಣ ನೀಡಿದ್ದಾಗಿ ದೂರು ನೀಡಿಲ್ಲ. ವೈದ್ಯರ ಮೇಲೆ ಆರೋಪ ಮಾಡುವಾಗ ಸೂಕ್ತ ಸಾಕ್ಷ್ಯಗಳಿರಬೇಕು. ಇಲ್ಲದಿದ್ದರೆ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನೈತಿಕ ಸ್ಥೈರ್ಯ ಕುಗ್ಗುತ್ತದೆ. ಒಂದು ವೇಳೆ ಸಾಕ್ಷ್ಯಧಾರಿತ ದೂರುಗಳಿದ್ದರೆ ಖಂಡಿತವಾಗಿಯೂ ಮೇಲಾಧಿಕಾರಿಗಳ ಗಮನಕ್ಕೆ ತಂದು ಕ್ರಮಕೈಗೊಳ್ಳಲು ತಿಳಿಸುವುದಾಗಿ ಸ್ಪಷ್ಟಪಡಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಪಘಾತ: ಸ್ಥಳದಲ್ಲೇ ಬೈಕ್ ಸವಾರರೀರ್ವರ ಸಾವು!

ಭೀಕರ ಅಪಘಾತ: ಬೆಂಕಿಯ ಕೆನ್ನಾಲಿಗೆಗೆ ಬೈಕ್ ಸವಾರ ಬಲಿ!

ರಾಷ್ಟ್ರದ ಹಿತದೃಷ್ಟಿಯಿಂದ ಬಿಜೆಪಿ ಬೆಂಬಲಿಸಿ :ನಾರಯಣಸ್ವಾಮಿ

ಕಬ್ಬಿನ ಬಿಲ್ ಪಾವತಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಪಘಾತ: ಸ್ಥಳದಲ್ಲೇ ಬೈಕ್ ಸವಾರರೀರ್ವರ ಸಾವು!
    In (ರಾಜ್ಯ ) ಜಿಲ್ಲೆ
  • ಭೀಕರ ಅಪಘಾತ: ಬೆಂಕಿಯ ಕೆನ್ನಾಲಿಗೆಗೆ ಬೈಕ್ ಸವಾರ ಬಲಿ!
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಆಸ್ಪತ್ರೆಗೆ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಭೇಟಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರದ ಹಿತದೃಷ್ಟಿಯಿಂದ ಬಿಜೆಪಿ ಬೆಂಬಲಿಸಿ :ನಾರಯಣಸ್ವಾಮಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬಿಲ್ ಪಾವತಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆಗೆ ಖಾಸಗಿ ಕಂಪನಿ ೧೦ ಲಕ್ಷ ರೂ. ಪೀಠೋಪಕರಣ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಕೂಡಗಿ ಉಷ್ಣ ವಿದ್ಯುತ್ ಸ್ಥಾವರಕ್ಕೆ ಎಸಿ ಗುರುನಾಥ ದಡ್ಡೆ ಭೇಟಿ
    In (ರಾಜ್ಯ ) ಜಿಲ್ಲೆ
  • ಡಾ.ಕೈಲಾಸನಾಥ ಶ್ರೀಗೆ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಏ.೧ ರಿಂದ ಸ್ವಯಂ ಗಣತಿಯಲ್ಲಿ ಭಾಗವಹಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಏ.೨ ರಂದು ಪೊಲೀಸ್ ಕಲ್ಯಾಣ ಮತ್ತು ಧ್ವಜ ದಿನಾಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.