ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಎರಡು ಬೈಕ್ ಗಳ ಮದ್ಯ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಬಸವನಬಾಗೇವಾಡಿಯ ತಾಲೂಕಿನ ಮಸಬಿನಾಳ ಬಳಿ ಸಂಭವಿಸಿದೆ.
ಇಂಗಳೇಶ್ವರ ತಾಂಡಾದ ಸಂತೋಷ ಲಾಲು ಚವಾಣ್ (32) ಮತ್ತುದೇಗಿನಾಳ ಗ್ರಾಮದ ಭೀಮನಗೌಡ ಪಾಟೀಲ (45) ಮೃತ ದುರ್ದೈವಿಗಳು.
ಇನ್ನು ಅಪಘಾತದಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದು ಗಾಯಾಳುಗಳನ್ನು ಚಿಕಿತ್ಸೆಗಾಗಿ ಬಸವನಬಾಗೇವಾಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಮನಗೂಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

