ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಸಮೀಪದ ಕಾಖಂಡಕಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಏಳು ವರ್ಷಗಳಿಂದ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ರಾಜಶೇಖರಯ್ಯ ಮಳಯ್ಯ ಮಠಪತಿ ಅವರಿಗೆ ಶಾಲಾ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಬಂದೇನವಾಜ್ ಗುರಾತೆ, ರಾಮನಗೌಡ ಪಾಟೀಲ್, ಉಮೇಶ್ ಸೊನ್ನದ, ಶಾಲೆಯ ಮುಖ್ಯ ಗುರುಮಾತೆ ಲಲಿತಾ ಕೋರಿ ಹಾಗೂ ಸಿಆರ್‌ಪಿ ಬಸವರಾಜ್ ಜಿಲ್ಲಿ, ಎಸ್‌ಡಿಎಂಸಿ ಸದಸ್ಯರು ಮತ್ತು ಶಾಲೆಯ ಸಿಬ್ಬಂದಿ ಉಪಸ್ಥಿತರಿದ್ದರು.

