Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉತ್ತಮ ಆಡಳಿತಗಾರನ ಮೊದಲ ಗುಣ ಸಹನೆ :ಡಾ.ಕುಲಕರ್ಣಿ
(ರಾಜ್ಯ ) ಜಿಲ್ಲೆ

ಉತ್ತಮ ಆಡಳಿತಗಾರನ ಮೊದಲ ಗುಣ ಸಹನೆ :ಡಾ.ಕುಲಕರ್ಣಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಪ್ರಾಚಾರ್ಯೆ ಡಾ. ಆರ್.ಎಂ.ಮಿರ್ಧೆ ಬೀಳ್ಕೊಡುಗೆ ಸಮಾರಂಭ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಹನೆ, ಕಠಿಣ ಪರಿಶ್ರಮ, ತ್ಯಾಗ ಹಾಗೂ ಸಮರ್ಪಣಾ ಮನೋಭಾವಗಳನ್ನು ಅಳವಡಿಸಿಕೊಂಡವರು ಉತ್ತಮ ಆಡಳಿತಗಾರರಾಗಲು ಸಾಧ್ಯ ಎಂದು ಬಿಎಲ್‌ಡಿಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ.ಆರ್.ವಿ.ಕುಲಕರ್ಣಿ ಹೇಳಿದರು.
ನಗರದ ಬಿಎಲ್‌ಡಿಇ ಸಂಸ್ಥೆಯ ಎಸ್‌ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಾರ್ಚ.೩೧ ರಂದು ಹಮ್ಮಿಕೊಳ್ಳಲಾಗಿದ್ದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉತ್ತಮ ಆಡಳಿತಗಾರನ ಮೊದಲ ಗುಣ ಸಹನೆ. ಪ್ರೊಫೆಸರ್ ಆಗಬೇಕು, ಪ್ರಿನ್ಸಿಪಲ್ ಆಗಬೇಕು ಎನ್ನುವ ಕನಸು ಎಲ್ಲರಲ್ಲೂ ಇರುತ್ತದೆ. ಆದರೆ ಪ್ರಾಚಾರ್ಯ ಹುದ್ದೆ ನಿರ್ವಹಣೆ ಅಷ್ಟೊಂದು ಸುಲಭವಾದದ್ದಲ್ಲ. ನಾವು ಆಡಳಿತ ಮಾಡಿ ನಮ್ಮ ಹೆಜ್ಜೆ ಗುರುತುಗಳನ್ನು ಆ ಸಂಸ್ಥೆಯಲ್ಲಿ ಉಳಿಸಿಕೊಂಡು ಹೋಗಬೇಕಾದರೆ ಸಂಯಮ ಹಾಗೂ ವೃತ್ತಿ ಮೇಲಿನ ನಮ್ಮ ಶ್ರದ್ಧೆ ಬಹಳ ಮುಖ್ಯವಾಗುತ್ತವೆ. ಆ ನಿಟ್ಟಿನಲ್ಲಿ ಡಾ.ಆರ್.ಎಂ.ಮಿರ್ಧೆ ಅವರು ಉತ್ತಮವಾದ ಆಡಳಿತ ಮಾಡಿದ್ದಾರೆ. ಅತ್ಯಂತ ಜವಾಬ್ದಾರಿಯುತವಾಗಿ ಹುದ್ದೆಯ ಗೌರವ ಹೆಚ್ಚಿಸಿದ್ದಾರೆ. ಸಂಸ್ಥೆಯ ಬೆಳವಣಿಗೆಗೆ ಹೆಗಲು ನೀಡಿ ನಮಗೆಲ್ಲ ಮಾದರಿಯಾಗಿದ್ದಾರೆ ಎಂದು ಹೇಳಿದರು.
ನಿವೃತ್ತ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ ಮಾತನಾಡಿ, ಬಿಎಲ್‌ಡಿಇ ಸಂಸ್ಥೆಯಲ್ಲಿ ಸುಧೀರ್ಘ ೩೮ ವರ್ಷಗಳ ಸಾರ್ಥಕ ವೃತ್ತಿ ಬದುಕು ಸಾಗಿಸಿದ್ದೇನೆ. ಈ ಸಂಸ್ಥೆ ನನಗೆ ಬಹಳಷ್ಟು ಜವಾಬ್ದಾರಿಯನ್ನು ನೀಡಿತ್ತು. ಅವುಗಳನ್ನು ನಿಮ್ಮೆಲ್ಲರ ಸಹಕಾರ ಹಾಗೂ ಸಲಹೆಯ ಮೇರೆಗೆ ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದೇನೆ ಎಂದರು.
ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಪ್ರೊ.ಎಸ್.ಹೆಚ್.ಲಗಳಿ, ಆಡಳಿತಾಧಿಕಾರಿ ಪ್ರೊ,ವಿ,ಎಸ್,ಬಗಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಎಲ್‌ಡಿಇ ಸಂಸ್ಥೆಯ ದೈಹಿಕ ನಿರ್ದೇಶಕರು ಎಸ್ ಎಸ್ ಕೋರಿ, ಪಿಯುಸಿ ಆಡಳಿತಾಧಿಕಾರಿ ಐ.ಎಸ.ಕಾಳಪ್ಪನವರ, ಬಿಎಲ್‌ಡಿಇ ಸಂಸ್ಥೆಯ ಅಧಿಕಾರಿಗಳು, ಪ್ರಭಾರ ಪ್ರಾಚಾರ್ಯ ಡಾ.ಅನೀಲ ನಾಯಕ ಡಾ.ಪಿ.ಎಸ್ ಪಾಟೀಲ ನೀವೃತ್ತ ಪ್ರಾಚಾರ್ಯ ಡಾ.ಯು.ಎಸ್.ಪೂಜೇರಿ, ಡಾ.ಎಸ್.ಟಿ.ಮೇರವಾಡೆ, ಪ್ರೊ.ಆರ್.ಹೆಚ್.ಬಿದರಿ, ಪ್ರೊ.ಜಿ.ಆರ್.ಅಂಬಲಿ, ಪಿಯುಸಿ ಪ್ರಾಚಾರ್ಯ ಪ್ರೊ.ಸಿ.ಬಿ.ಪಾಟೀಲ, ಪ್ರೊ.ಎಸ್.ಜೆ ಜೀರಗಾಳಿ, ಡಾ.ಎಸ್.ಬಿ.ಕಮತಿ ವಿವಿಧ ಮಹಾವಿದ್ಯಾಲಯದ ಪ್ರಾಚಾರ್ಯರು, ಪ್ರಾಧ್ಯಾಪಕರು, ಬೋಧಕರು, ಬೋಧಕೆತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಿ ಕವಿ ಸರ್ವಜ್ಞ
    In ವಿಶೇಷ ಲೇಖನ
  • ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ
    In ವಿಶೇಷ ಲೇಖನ
  • ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
    In (ರಾಜ್ಯ ) ಜಿಲ್ಲೆ
  • ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು
    In (ರಾಜ್ಯ ) ಜಿಲ್ಲೆ
  • ಜೂ.೧೮ರಿಂದ ಬಂಜಾರ ಯುವಕ-ಯುವತಿಯರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಉಪವಿಭಾಗ ಕಚೇರಿ ಆರಂಭಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಯೋಜನೆಗಳು ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.