ವಿಜಯಪುರ: ಔದ್ಯೋಗಿಕ ಕ್ರಾಂತಿಯ ಮೂಲಕ ರಾಜ್ಯದ ಅಭಿವೃದ್ಧಿಗೆ ಪಣ ತೊಟ್ಟಿದ್ದು, ಜಿಲ್ಲೆಯ ಪ್ರಗತಿಗೂ ಆದ್ಯತೆ ನೀಡುವುದಾಗಿ ಬೃಹತ್ ಮತ್ತು ಮದ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ ಬಿ ಪಾಟೀಲ ಹೇಳಿದರು.
ಬಂಡವಾಳ ಹೂಡಿಕೆಗಾಗಿ ಹಲವಾರು ದೇಶಗಳಿಗೆ ಭೇಟಿ ನೀಡಿ ನಗರಕ್ಕಾಗಮಿಸಿದ ಸಂದರ್ಭದಲ್ಲಿ ದೇವರಹಿಪ್ಪರಗಿ ಮತಕ್ಷೇತ್ರದ ಕಾಂಗ್ರೆಸ್ ಮುಖಂಡರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಂಡವಾಳ ಹೂಡಲು ಹಲವಾರು ದೇಶದ ಉದ್ಯಮಿಗಳು ಮುಂದೆ ಬರುತ್ತಿದ್ದಾರೆ. ಇನ್ನು ಐದು ವರ್ಷಗಳಲ್ಲಿ ನಮ್ಮ ರಾಜ್ಯ ಸಾಕಷ್ಟು ಬದಲಾವಣೆಯಾಗಲಿದೆ. ಮುಂಬರುವ ದಿನಗಳಲ್ಲಿ ದುಡಿಯುವ ಕೈಗಳಿಗೆ ಇಲ್ಲಿಯೇ ಉದ್ಯೋಗ ಸಿಗಲಿದ್ದು, ಒಂದಿಷ್ಟು ನಿರುದ್ಯೋಗ ಸಮಸ್ಯೆ ಪರಿಹಾರವಾಗಲಿದೆ. ಈಗ ಸದ್ಯ ರಾಜ್ಯದಲ್ಲಿ ಬರಗಾಲ ಕಾಡುತ್ತಿದ್ದು, ಜಿಲ್ಲೆಯಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ, ಮೇವು ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕುಡಿಯುವ ನೀರಿಗಾಗಿ ಕಾಲುವೆಗಳಿಗೆ ನೀರು ಹರಿಸಲು ತಿಳಿಸಿಲಾಗಿದೆ. ಕೆರೆಗಳ ಸಂರಕ್ಷಣೆ ಜೊತೆಗೆ ತುಂಬಿಸುವ ಕಾರ್ಯ ಮಾಡಲಾಗುವುದು ಎಂದರು.
ವ್ಹಿಡಿಸಿಸಿ ಬ್ಯಾಂಕಿನ ನಿರ್ದೇಶಕ ಬಿ ಎಸ್ ಪಾಟೀಲ ಯಾಳಗಿ, ಗಡಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುಭಾಷ ಛಾಯಾಗೋಳ, ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥ ಕಾಂಗ್ರೆಸ್ ಮುಖಂಡ ಡಾ. ಪ್ರಭುಗೌಡ ಲಿಂಗದಳ್ಳಿ, ಕೋರವಾರ ಪಿಕೆಪಿಎಸ್ ಅಧ್ಯಕ್ಷ ಸಂಗಮೇಶ ಛಾಯಾಗೋಳ, ಬ್ಲಾಕ್ ಅಧ್ಯಕ್ಷ ಬಶೀರಅಹಮ್ಮದ ಬೇಪಾರಿ, ಬಾಳಾಸಾಹೇಬಗೌಡ ಪಾಟೀಲ, ಮಹಿಳಾ ಅಧ್ಯಕ್ಷೆ ರಮೀಜಾ ನದಾಫ, ಮಹಿಳಾ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷೆ ಲಲಿತಾ ದೊಡಮನಿ, ದತ್ತಾತ್ರೆಯ ಹೊಸಮಠ, ಸಂಗನಗೌಡ ಪಾಟೀಲ ಸೇರಿದಂತೆ ಮತ್ತೀತರರಿದ್ದರು.
ಔದ್ಯೋಗಿಕ ಕ್ರಾಂತಿಯಿಂದ ರಾಜ್ಯದ ಅಭಿವೃದ್ಧಿಗೆ ಪಣ :ಸಚಿವ ಎಂ.ಬಿ.ಪಾಟೀಲ
Related Posts
Add A Comment