ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಶ್ರೀ ವಜ್ರ ಹನುಮಾನ ದೇವಸ್ಥಾನದ ಸೇವಾ ಸಮಿತಿ ಆಶ್ರಯದಲ್ಲಿ ಚೈತ್ರ ಮಾಸ ಪೂರ್ಣಿಮೆ ಪ್ರಯುಕ್ತ ಶ್ರೀ ಹನುಮಾನ ದೇವರ ಜಯಂತ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ಸೇವಾ ಸಮಿತಿ ಅಧ್ಯಕ್ಷ ಪಾಂಡು ಸಾಹುಕಾರ ದೊಡ್ಡಮನಿ ತಿಳಿಸಿದ್ದಾರೆ.
ಜಯಂತ್ಯೋತ್ಸವ ಅಂಗವಾಗಿ ಬೆಳಿಗ್ಗೆ 4 ಗಂಟೆಗೆ ಮಂಗಳವಾದ್ಯಗಳೊಂದಿಗೆ ಶ್ರೀ ಹನುಮಾನ ದೇವರಿಗೆ ವಿಶೇಷ ಅಲಂಕಾರ ಹಾಗೂ ಪಂಚಾಮೃತ ಅಭಿಷೇಕ ನೆರವೇರಿಸಲಾಗುತ್ತದೆ. ಬೆಳಿಗ್ಗೆ 6.22ಕ್ಕೆ ಶ್ರೀ ವಜ್ರ ಹನುಮಾನ್ ದೇವರನ್ನು ತೊಟ್ಟಿಲಲ್ಲಿ ಹಾಕಿ ನಾಮಕರಣ ಕಾರ್ಯಕ್ರಮ ನಡೆಯಲಿದೆ. ಬಳಿಕ ಮಂಗಳಾರತಿ ಹಾಗೂ ಆಶೀರ್ವಚನ ಕಾರ್ಯಕ್ರಮಗಳು ಜರುಗಲಿವೆ.
ಮಧ್ಯಾಹ್ನ 12.30ಕ್ಕೆ ದೇವಸ್ಥಾನದ ಆವರಣದಲ್ಲಿ ಅನ್ನಪ್ರಸಾದ ಸೇವೆ ಏರ್ಪಡಿಸಲಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಿತಿ ಅಧ್ಯಕ್ಷರು ಮನವಿ ಮಾಡಿದ್ದಾರೆ.

