Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಾಪಮಾನ ಹಿನ್ನೆಲೆ ಬದಲಾದ ಸರ್ಕಾರಿ ಕಚೇರಿ ಸಮಯ
(ರಾಜ್ಯ ) ಜಿಲ್ಲೆ

ತಾಪಮಾನ ಹಿನ್ನೆಲೆ ಬದಲಾದ ಸರ್ಕಾರಿ ಕಚೇರಿ ಸಮಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಿಗದಿತ ಸಮಯಕ್ಕೆ ಕಚೇರಿಯಲ್ಲಿರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಖಡಕ್ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೬ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನ ಹಿನ್ನೆಲೆಯಲ್ಲಿ ಏಪ್ರಿಲ್.೧ರಿಂದ ಜಿಲ್ಲೆಯಲ್ಲಿ ಸರಕಾರಿ ಕಚೇರಿ ಸಮಯ ಬದಲಾವಣೆಯಾಗುತ್ತಿದ್ದಂತೆಯೇ, ಬುಧವಾರ ಬೆಳಗ್ಗೆಯೇ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಸೇರಿದಂತೆ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಿ,ಅಧಿಕಾರಿ, ಸಿಬ್ಬಂದಿ ಹಾಜರಾತಿ ಪರಿಶೀಲಿಸಿದರು.
ಕಚೇರಿ ಸಮಯ ಬದಲಾವಣೆ ಹಿನ್ನೆಲೆಯಲ್ಲಿ ಬುಧವಾರ ನಗರದ ವಿವಿಧ ಇಲಾಖೆಗಳ ಕಚೇರಿಗೆ ದಿಢೀರ್ ಭೇಟಿ ನೀಡಿ, ಸಿಬ್ಬಂದಿ ಹಾಜರಾತಿ ಪರಿಶೀಲನೆ ನಡೆಸಿದರು. ಎಲ್ಲ ಅಧಿಕಾರಿ, ಸಿಬ್ಬಂದಿ ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗಬೇಕು. ದೈನಂದಿನ ಕಚೇರಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಯಾವುದೇ ಸಿಬ್ಬಂದಿ ಯಾವುದೇ ಕಡತ:ವಹಿ ಬಾಕಿ ಉಳಿಸಿಕೊಳ್ಳದೇ ಕಾರ್ಯ ನಿರ್ವಹಿಸುವ ಮೂಲಕ ಕಡತಗಳನ್ನು ವಿಲೇವಾರಿಯಲ್ಲಿ ಪ್ರಗತಿ ಸಾಧಿಸಬೇಕು ಎಂದು ಸೂಚಿಸಿದರು.
ಸಾರ್ವಜನಿಕರಿಗೆ ಸ್ಪಂದಿಸಿ: ತಮ್ಮ ಎಂದಿನ ಕೆಲಸ ಕಾರ್ಯಗಳಿಗೆ ಆಯಾ ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ಸ್ಪಂದನೆ ನೀಡಬೇಕು. ಅವರ ಸಮಸ್ಯೆಗಳನ್ನು ಸಹಾನುಭೂತಿಯಿಂದ ಆಲಿಸಿ ಎಂದರು.
ಯಾವುದೇ ಲೋಪ-ದೋಷ ಉಂಟಾಗದಂತೆ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇಡೀ ಜಿಲ್ಲೆಯಾದ್ಯಂತ ಎಲ್ಲ ಸರ್ಕಾರಿ ಕಚೇರಿಗಳ ಸಿಬ್ಬಂದಿ ಬದಲಾದ ಸಮಯದಲ್ಲಿ ಕಚೇರಿಯಲ್ಲಿದ್ದುಕೊಂಡು ಯಾವುದೇ ಅಡೆತಡೆಯಿಲ್ಲದ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದರು.
ಸರ್ಕಾರಿ ಕಚೇರಿ ಕೆಲಸಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಹಾಗೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತುರ್ತು ಸಂದರ್ಭಗಳಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶನ ನೀಡಿದರೆ ಸಮಯದ ಮಿತಿಯಿಲ್ಲದೇ ಕೆಲಸ ನಿರ್ವಹಿಸಬೇಕೆಂದು ಇದೇ ವೇಳೆ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗೆ ಸೂಚಿಸಿದರು.

ನಿಗದಿತ ಸಮಯಕ್ಕೆ ಕಚೇರಿಯಲ್ಲಿರಲೇಕು

ಇದೇ ವೇಳೆ ಕಚೇರಿಯಲ್ಲಿ ಅಗತ್ಯ ಮೂಲಭೂತ ಸೌಲಭ್ಯ ವ್ಯವಸ್ಥೆ ಇರಬೇಕು. ಜೊತೆಗೆ ಕಚೇರಿ ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಿರಬೇಕಾದುದು ಕಡ್ಡಾಯ. ಯಾವುದೇ ಕಚೇರಿಗೆ ಹಠಾತ್ ಭೇಟಿ ನೀಡಲಾಗುವುದು. ಕಚೇರಿಯ ವೇಳೆಯಲ್ಲಿ ಕಚೇರಿಯಲ್ಲಿದ್ದು ಕಡತಗಳನ್ನು ತಕ್ಷಣಕ್ಕೆ ವಿಲೇವಾರಿ ಮಾಡಬೇಕು ಎಂದು ಇದೇ ವೇಳೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೂ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಸೂಚಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಿ ಕವಿ ಸರ್ವಜ್ಞ
    In ವಿಶೇಷ ಲೇಖನ
  • ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ
    In ವಿಶೇಷ ಲೇಖನ
  • ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
    In (ರಾಜ್ಯ ) ಜಿಲ್ಲೆ
  • ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು
    In (ರಾಜ್ಯ ) ಜಿಲ್ಲೆ
  • ಜೂ.೧೮ರಿಂದ ಬಂಜಾರ ಯುವಕ-ಯುವತಿಯರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಉಪವಿಭಾಗ ಕಚೇರಿ ಆರಂಭಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಯೋಜನೆಗಳು ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.