ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಾದ್ಯಂತ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ–೧ರ ಸುಸೂತ್ರ ಹಾಗೂ ಪಾರದರ್ಶಕ ನಿರ್ವಹಣೆಗೆ ಒತ್ತು ನೀಡುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಇಂದು ನಗರದ ಸೆಂಟ್ ಜೋಸೆಫ್ ಪ್ರೌಢಶಾಲೆ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪರೀಕ್ಷಾ ಕೊಠಡಿಗಳಲ್ಲಿ ಮೇಲ್ವಿಚಾರಕರು ಕಟ್ಟುನಿಟ್ಟಾಗಿ ನಿಯಮ ಪಾಲಿಸುತ್ತಿರುವುದನ್ನು ವೀಕ್ಷಿಸಿದರು. ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆಗೆ ಮಹತ್ವ ನೀಡಿ, ಕೇಂದ್ರದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮರಾಗಳು, ಡಿಜಿಟಲ್ ನಿಗಾ ವ್ಯವಸ್ಥೆಗಳು ಹಾಗೂ ಅವುಗಳ ನಿರಂತರ ಕಾರ್ಯನಿರ್ವಹಣೆಯನ್ನು ಸಿಇಒ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಯ ಮುಖ್ಯೋಪಾಧ್ಯಾಯರು, ಪರೀಕ್ಷಾ ಅಧೀಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

