ಜನಗಣತಿ ಕಾರ್ಯ ಯಶಸ್ವಿಗೊಳಿಸಲು ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಮನವಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಾದ್ಯಂತ ಏ. ೧ರಿಂದ ರಾಷ್ಟ್ರೀಯ ಜನಗಣತಿಯ ಮೊದಲ ಹಂತದ ಸ್ವಯಂ ಜನಗಣತಿ ಕಾರ್ಯಾರಂಭವಾಗಿದ್ದು, ಏ. ೧೫ ರೊಳಗಾಗಿ ಪ್ರತಿಯೊಬ್ಬರೂ ತಮ್ಮ ಕುಟುಂಬದವರ ಸ್ವಯಂ ಗಣತಿಗೊಳಪಡಿಸುವ ಮೂಲಕ ಜನಗಣತಿ ಕಾರ್ಯ ಯಶಸ್ವಿಗೆ ಕೈ ಜೋಡಿಸುವಂತೆ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಸಾರ್ವಜನಿಕರಿಗೆ ಮನವಿ ಮಾಡಿದರು.
ರಾಷ್ಟ್ರೀಯ ಜನಗಣತಿ ೨೦೨೭ ರ ಮೊದಲ ಹಂತದ ಸ್ವಯಂ ಗಣತಿ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಅವರು ಮಾತನಾಡಿದರು.
ಸ್ವಯಂ ಗಣತಿ ಅತ್ಯಂತ ಸರಳವಾಗಿದ್ದು, ಕೇವಲ ಐದು ನಿಮಿಷದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದಾಗಿದೆ. ಈಗಾಗಲೇ ನಾನು ಆ ಕಾರ್ಯ ಪೂರ್ಣಗೊಳಿಸಿದ್ದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.
ದೇಶದ ಮಹತ್ವಾಕಾಂಕ್ಷಿಯ ಜನಗಣತಿ ಪ್ರಕ್ರಿಯೆ ಏ.೧ರಿಂದ ಆರಂಭಗೊಂಡಿದ್ದು, ಜನಗಣತಿ ದೇಶದ ಅಭಿವೃದ್ಧಿಗೆ ಪೂರಕವಾದ ಪ್ರಮುಖ ಕಾರ್ಯವಾಗಿದೆ. ಈ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ನಿಖರ ಮಾಹಿತಿ ನೀಡುವ ಮೂಲಕ ಸಹಕರಿಸಿಬೇಕು. ಏ.೧೫ರವರೆಗೆ ಸ್ವಯಂ ವಿವರ ದಾಖಲಿಸಲು ಅವಕಾಶವಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ, ಇಂಡಿ, ವಿಜಯಪುರ ಉಪವಿಭಾಗಾಧಿಕಾರಿಗಳು, ಎಲ್ಲ ತಾಲೂಕಿನ ತಹಸೀಲ್ದಾರ್ ರು, ಬಿಇಒ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪೊಲೀಸ್ ಸಿಬ್ಬಂದಿ ಸ್ವಯಂ ಗಣತಿ ಮಾಡಿಸಿಕೊಳ್ಳಿ :ಎಸ್ಪಿ
ಜಿಲ್ಲೆಯ ಪ್ರತಿ ಪೊಲೀಸ್ ಠಾಣೆ ಸಿಬ್ಬಂದಿಯನ್ನು ಸ್ವಯಂ ಗಣತಿ ಮಾಡಿಸಿಕೊಳ್ಳಲು ಸೂಚಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಜಿಲ್ಲಾಧಿಕಾರಿಗಳಿಗೆ ವಿವರಿಸಿದರು.

ಏ.೧೬ ರಿಂದ ಮೇ ೧೫ ವರೆಗೆ ಕ್ಷೇತ್ರ ಪರಿಶೀಲನೆ
ಏ. ೧೬ ರಿಂದ ಮೇ ೧೫ ರವರೆಗಿನ ಅವಧಿಯಲ್ಲಿ ಗಣತಿದಾರರು ಮನೆಗೆ ಭೇಟಿ ನೀಡಿ ವಿವರಗಳನ್ನು ಪರಿಶೀಲಿಸುತ್ತಾರೆ.
ಒಂದು ವೇಳೆ ಸ್ವಯಂ ಗಣತಿ ಪೂರ್ಣಗೊಳಿಸದಿದ್ದರೆ, ಅವರು ನಿಮ್ಮಿಂದಲೇ ಮಾಹಿತಿಯನ್ನು ಸಂಗ್ರಹಿಸುತ್ತಾರೆ. ಈ ಅವಧಿಯಲ್ಲಿ ಶೇ.೧೦೦ರಷ್ಟು ಗೌಪ್ಯತೆ ಇಟ್ಟು ನಿಮ್ಮ ಸ್ವಯಂ ಗಣತಿಯನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಜನತೆ ಇದರ ಸದುಪಯೋಗ ಪಡೆದುಕೊಂಡು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಹೇಳಿದರು.
ಸಾರ್ವಜನಿಕರು ಮಾಡಬೇಕಾದುದು ಇಷ್ಟೇ
ಜನಗಣತಿಯ ವೆಬ್ ಪೋರ್ಟಲ್: hಣಣಠಿs://se.ಛಿeಟಿsus.gov.iಟಿ ಗೆ ಮೊಬೈಲ್ ಸಂಖ್ಯೆ ಮತ್ತು ಒಟಿಪಿ ಬಳಸಿ ಲಾಗಿನ್ ಆಗಿ, ಬಳಿಕ ನಿಮ್ಮ ಸ್ಥಳ ಆಯ್ಕೆ ಮಾಡಿ, ನಕ್ಷೆಯಲ್ಲಿ ನಿಮ್ಮ ಮನೆ ಗುರುತಿಸಿ, ಬಳಿಕ ಮನೆಯ ಇಲ್ಲವೇ ಕುಟುಂಬದ ವಿವರ ಭರ್ತಿ ಮಾಡಿ, ನಿಮ್ಮ Sಇ ಖeಜಿeಡಿeಟಿಛಿe Iಆ ಪಡೆಯಿರಿ. ಈಗ ಬಂದಿರುವ ನಿಮ್ಮ ಎಸ್ ಇ ಐಡಿ ಅನ್ನು ಸುರಕ್ಷಿತವಾಗಿ ಇಟ್ಟು, ಗಣತಿದಾರರು ಮನೆಗೆ ಬಂದಾಗ ಅದನ್ನು ಅವರೊಂದಿಗೆ ಹಂಚಿಕೊಂಡರೆ ನೀವು ಜನಗಣತಿ ಕಾರ್ಯಕ್ಕೆ ಕೈಜೋಡಿಸಿದಂತಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆನಂದ್ ಕೆ. ವಿವರಿಸಿದರು.

