Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಲ್ಲಯ್ಯ ಕಂಬಿಗಳಿಗೆ ಭಕ್ತರಿಂದ ಅದ್ದೂರಿ ಪುರಪ್ರವೇಶ
(ರಾಜ್ಯ ) ಜಿಲ್ಲೆ

ಮಲ್ಲಯ್ಯ ಕಂಬಿಗಳಿಗೆ ಭಕ್ತರಿಂದ ಅದ್ದೂರಿ ಪುರಪ್ರವೇಶ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಸುಕ್ಷೇತ್ರ ಶ್ರೀಶೈಲ ಕ್ಷೇತ್ರಕ್ಕೆ ತೆರಳಿದ್ದ ಮಲ್ಲಯ್ಯನ ಕಂಬಿಗಳನ್ನು ಭಕ್ತರು ವಿವಿಧ ವಾಧ್ಯ ಮೇಳಗಳೊಂದಿಗೆ ಸಂಭ್ರಮ, ಸಡಗರದಿಂದ ಗುರುವಾರ ಬರಮಾಡಿಕೊಂಡರು.
ಕಳೆದ ತಿಂಗಳು ಹೋಳಿಹುಣ್ಣಿಮೆ ಮರುದಿನ ಇಲ್ಲಿಂದ ಪಾದಯಾತ್ರಾ ಭಕ್ತರೊಂದಿಗೆ ಕಂಬಿಗಳು ಪಾದಯಾತ್ರೆ ಮೂಲಕ ಶ್ರೀಶೈಲ ಕ್ಷೇತ್ರಕ್ಕೆ ತೆರಳಿದ್ದವು. ದ್ವಾದಶ ಲಿಂಗಗಳಲ್ಲಿ ಒಂದಾದ ಸುಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ ಕ್ಷೇತ್ರದಲ್ಲಿ ಪ್ರತಿ ವರ್ಷ ಯುಗಾದಿ ಹಬ್ಬದಂದು ನಡೆಯುವ ರಥೋತ್ಸವದಲ್ಲಿ ಈ ಭಾಗದ ಜನರು ಭಾಗವಹಿಸಿ ತಮ್ಮ ತಮ್ಮ ಗ್ರಾಮಗಳಿಗೆ ಆಗಮಿಸುತ್ತಾರೆ. ತದ ನಂತರ ಹುಣ್ಣಿಮೆಗೆ ಆಯಾ ಆಯಾ ಗ್ರಾಮಗಳಿಗೆ ಅಂದು ತೆರಳಿದ್ದ ಮಲ್ಲಯ್ಯನ ಕಂಬಿಗಳು ಆಗಮಿಸುವದು ವಾಡಿಕೆ.
ಪಟ್ಟಣದ ಮುದ್ದೇಬಿಹಾಳ ರಸ್ತೆಯಲ್ಲಿರುವ ಕಂಬಿ ಕಟ್ಟೆಗೆ ವಾಡಿಕೆಯಂತೆ ಬುಧವಾರ ರಾತ್ರಿ ಮಲ್ಲಯ್ಯನ ಕಂಬಿಗಳು ಬಂದು ತಲುಪಿದವು. ಗುರುವಾರ ಬೆಳಗ್ಗೆ ಇಲ್ಲಿನ ಭಕ್ತರು ಅಶೋಕ ಕುಂಬಾರರ ಮನೆಗೆ ತೆರಳಿ ಅಲ್ಲಿಂದ ನಗಾರಿ, ದೀವಟಿಗೆ, ಪೂಜಾ ಸಾಮಗ್ರಿಗಳೊಂದಿಗೆ ಕಿರಣ ಕುಲಕರ್ಣಿಯವರ ಮನೆಗೆ, ಗೌಡರ ಮನೆಗೆ ವಿವಿಧ ವಾಧ್ಯ ಮೇಳಗಳೊಂದಿಗೆ ತೆರಳಿ ಅವರನ್ನು ಕರೆದುಕೊಂಡು ಕಂಬಿ ಕಟ್ಟೆಗೆ ಆಗಮಿಸಿದರು. ನಂತರ ಕಂಬಿ ಕಟ್ಟೆಯಲ್ಲಿ ಮಲ್ಲಯ್ಯನ ಕಂಬಿಗಳಿಗೆ ವಿಶೇಷ ಪೂಜೆ ಸಲ್ಲಿಸಿ ಮಂಗಳಾರತಿ ಸಲ್ಲಿಸಿ ವಾದ್ಯಮೇಳಗಳೊಂದಿಗೆ ಬಸವೇಶ್ವರ ದೇವಸ್ಥಾನಕ್ಕೆ ಭಕ್ತರು ಅವುಗಳನ್ನು ಬರಮಾಡಿಕೊಂಡರು. ಬಸವೇಶ್ವರ ದೇವಸ್ಥಾನದಲ್ಲಿ ಬಂದು ಕುಳಿತ ಮಲ್ಲಯ್ಯನ ಕಂಬಿಗಳಿಗೆ ಭಕ್ತರು ಬೆಲ್ಲವನ್ನು ಮಲ್ಲಯ್ಯನಿಗೆ ಅರ್ಪಿಸಿ ನೆರೆದ ಭಕ್ತ ಸಮೂಹಕ್ಕೆ ಹಂಚಿ ಧನ್ಯತಾ ಭವಾ ಅನುಭವಿಸಿದರು.
ವೇ.ಗುರುಸಂಗಯ್ಯ ಮಠಪತಿ, ಶ್ರೀಶೈಲ ಮಠಪತಿ, ಎ.ಐ.ಮಠಪತಿ ಅವರನ್ನು ಮಾತನಾಡಿಸಿದಾಗ, ಪ್ರತಿ ವರ್ಷವೂ ಮಲ್ಲಯ್ಯನ ಕಂಬಿಗಳು ಶ್ರೀಶೈಲಕ್ಕೆ ತೆರಳುತ್ತವೆ. ಅಲ್ಲಿ ಮಲ್ಲಯ್ಯನ ಜಾತ್ರೆ ಮುಗಿಸಿಕೊಂಡು ಹದಿನೈದು ದಿನಗಳ ನಂತರ ಕಂಬಿಗಳು ಆಗಮಿಸಿದ ನಂತರ ಶ್ರೀಶೈಲ ಮಲ್ಲಿಕಾರ್ಜುನ ಭಕ್ತರು ತಮ್ಮ ತಮ್ಮ ಮನೆಗಳಲ್ಲಿ ಬೋರಮ್ಮ ಎಂದು ಪೂಜೆಯನ್ನು ಮಾಡುವ ಮೂಲಕ ಶ್ರೀಶೈಲ ಕ್ಷೇತ್ರದ ಹರಕೆಯನ್ನು ತೀರಿಸುವ ಪದ್ದತಿ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಪ್ರತಿ ಗ್ರಾಮದಲ್ಲಿ ಮಲ್ಲಯ್ಯನ ಕಂಬಿಗಳು ಬಂದ ನಂತರವೇ ಈ ಪೂಜೆ ಎಲ್ಲರ ಮನೆಯಲ್ಲಿ ಅವರ ಅನುಕೂಲಕ್ಕೆ ತಕ್ಕಂತೆ ಎರಡು ತಿಂಗಳ ಕಾಲ ನಡೆಯುತ್ತದೆ. ಏ.6 ರಂದು ಪಟ್ಟಣದಲ್ಲಿ ಐದೇಶಿ(ಬೋರಮ್ಮ) ಪೂಜೆಯನ್ನು ಭಕ್ತರು ಮಾಡುವರು ಎಂದರು.
ಕಂಬಿ ಮೆರವಣಿಗೆಯಲ್ಲಿ ಗುರುಸಂಗಯ್ಯ ಮಠಪತಿ, ಕಾಳಹಸ್ತೇಶ್ವರಯ್ಯ ಕಾಳಹಸ್ತೇಶ್ವರಮಠ, ಅಪ್ಪಯ್ಯ ಮಠಪತಿ, ಪಂಚಾಕ್ಷರಿ ಕಾಳಹಸ್ತೇಶ್ವರಮಠ,ಶಿವಲಿಂಗಯ್ಯ ತೆಗ್ಗಿನಮಠ, ಶ್ರೀಶೈಲ ಮಠಪತಿ, ಬಸಯ್ಯ ಮಠಪತಿ,ಮಲ್ಲಯ್ಯ ಸಾರಂಗಮಠ, ವಿರುಪಾಕ್ಷಿ ಮಠಪತಿ, ಬಸವರಾಜ ಹಾರಿವಾಳ, ಚಂದ್ರಶೇಖರ ಮುರಾಳ, ಮಲ್ಲೇಶಿ ಕಡಕೋಳ, ಬ್ರಹ್ಮಾನಂದ ಕುಂಬಾರ, ಬಸವರಾಜ ಕುಂಬಾರ, ಮಲ್ಲಿಕಾರ್ಜುನ ಕುಂಬಾರ, ಮಂಜುನಾಥ ಕುಂಬಾರ, ಅಶೋಕ ಕುಂಬಾರ, ಶ್ರೀಶೈಲ ಕುಂಬಾರ, ಕಿರಣ ಕುಲಕರ್ಣಿ, ಶ್ರೀಶೈಲ ಪತ್ತಾರ, ರಾಜು ನಾಲತವಾಡ, ಮುರುಗೇಶಿ ಗೊಳಸಂಗಿ, ಅಶೋಕ ಗೌರನ್ನವರ, ಪರಮಾನಂದ ಓಲೇಕಾರ, ರಾಜೇಶ್ವರಿ ಕುಂಬಾರ, ಮೀನಾಕ್ಷಿ ಕುಂಬಾರ, ರಂಜಿತಾ ಕುಂಬಾರ ಸೇರಿದಂತೆ ಇತರರು ಭಾಗವಹಿಸಿದ್ದರು.

ಭಕ್ತರಿಗೆ ಪ್ರಸಾದ ವ್ಯವಸ್ಥೆ

ಪಟ್ಟಣದ ಬಸವೇಶ್ವರ ದೇವಸ್ಥಾನದ ಜೀರ್ಣೋದ್ದಾರಕರ ದಿ. ಮಲ್ಲಪ್ಪ ಸಿಂಹಾಸನ ಪ್ರತಿಮೆ ಆವರಣದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ಪಾದಯಾತ್ರೆ ಸೇವಾ ಸಮಿತಿಯಿಂದ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಶ್ರೀಶೈಲ ಮಲ್ಲಿಕಾರ್ಜನ ಪಾದಯಾತ್ರೆ ಸೇವಾ ಸಮಿತಿಯಿಂದ ಎಂಟು ಕ್ವಿಂಟಾಲ್ ಸುರಮಾ, ಹಾಲು, ಬದನೇಕಾಯಿ ಪಲ್ಲ್ಯೆ, ಕ್ವಿಂಟಾಲ್ ಅಕ್ಕಿ, ಸಾಂಬಾರು ಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದು ಕಾಳಹಸ್ತೇಶ್ವರಯ್ಯ ಕಾಳಹಸ್ತೇಶ್ವರಮಠ ಮಾಹಿತಿ ನೀಡಿದರು. ದಿನಪೂರ್ತಿ ಅಪಾರ ಸಂಖ್ಯೆಯ ಜನರು ಪ್ರಸಾದ ಸ್ವೀಕರಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಿ ಕವಿ ಸರ್ವಜ್ಞ
    In ವಿಶೇಷ ಲೇಖನ
  • ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ
    In ವಿಶೇಷ ಲೇಖನ
  • ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
    In (ರಾಜ್ಯ ) ಜಿಲ್ಲೆ
  • ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು
    In (ರಾಜ್ಯ ) ಜಿಲ್ಲೆ
  • ಜೂ.೧೮ರಿಂದ ಬಂಜಾರ ಯುವಕ-ಯುವತಿಯರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಉಪವಿಭಾಗ ಕಚೇರಿ ಆರಂಭಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಯೋಜನೆಗಳು ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.