ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ೧೧೯ನೇ ಜಯಂತಿ ಕಾರ್ಯಕ್ರಮವನ್ನು ಏಪ್ರಿಲ್ ೫ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಸೆಟ್‌ಲೈಟ್ ಬಸ್ ನಿಲ್ದಾಣದ ಹತ್ತಿರ ಇರುವ ಡಾ. ಬಾಬು ಜಗಜೀವನರಾಂ ವೃತ್ತದಿಂದ ನಗರದ ಪ್ರಮುಖ ವೃತ್ತಗಳ ಮೂಲಕ ಸಾಗಿ, ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದವರೆಗೆ ಭಾವಚಿತ್ರದ ಮೆರವಣಿಗೆ ಜರುಗಲಿದೆ.
ಈ ಜಯಂತಿ ಕಾರ್ಯಕ್ರಮಕ್ಕೆ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿ,ಸಿಬ್ಬಂದಿ, ಜಿಲ್ಲೆಯ ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಎಲ್ಲಾ ಸಮುದಾಯದ ಗಣ್ಯರು ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
