ಉದಯರಶ್ಮಿ ದಿನಪತ್ರಿಕೆ
ಚಡಚಣ: ಪಟ್ಟಣ ಪಂಚಾಯತಿ ಚಡಚಣ ವ್ಯಾಪ್ತಿಯ ನಾಗರಿಕರು 2026-27ನೇ ಸಾಲಿನ ಆಸ್ತಿ ತೆರಿಗೆಯನ್ನು ಏಪ್ರಿಲ್ 1ರಿಂದ 30ರೊಳಗೆ ಪಾವತಿಸಿದಲ್ಲಿ ಒಟ್ಟು ಮೊತ್ತದಲ್ಲಿ ಶೇ.5 ರಿಯಾಯಿತಿ ಪಡೆಯಬಹುದಾಗಿದೆ ಎಂದು ಪಟ್ಟಣ ಪಂಚಾಯತಿ ಪ್ರಕಟಣೆಯಲ್ಲಿ ತಿಳಿಸಿದೆ.
ನಿಗದಿತ ಅವಧಿಯೊಳಗೆ ತೆರಿಗೆ ಪಾವತಿಸಿ ಈ ರಿಯಾಯತಿ ಸದುಪಯೋಗಪಡಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಮೇ ಹಾಗೂ ಜೂನ್ ತಿಂಗಳಲ್ಲಿ ಯಾವುದೇ ರೀತಿಯ ರಿಯಾಯತಿ ನೀಡಲಾಗುವುದಿಲ್ಲ. ಜುಲೈ ತಿಂಗಳಿಂದ ಬಾಕಿ ಇರುವ ಆಸ್ತಿ ತೆರಿಗೆಯ ಮೇಲೆ ಶೇ.2ರಷ್ಟು ಬಡ್ಡಿ ವಿಧಿಸಲಾಗುವುದು ಎಂದು ತಿಳಿಸಲಾಗಿದೆ.
ಆಸ್ತಿ ತೆರಿಗೆ ಪಾವತಿಸಲು ನಾಗರಿಕರು ಪಟ್ಟಣ ಪಂಚಾಯತಿ ಕಚೇರಿಗೆ ಭೇಟಿ ನೀಡಿ ಪಾವತಿ ಮಾಡಬಹುದು.
ಈ ಕುರಿತು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಬಾಬಾಸಾಹೇಬ ತಾವಸೆ, ಅಧ್ಯಕ್ಷ ಮಲ್ಲಿಕಾರ್ಜುನ ಧೋತ್ರೆ ಹಾಗೂ ಉಪಾಧ್ಯಕ್ಷ ಇಲಾಹಿಸಾಬ ನದಾಫ ತಿಳಿಸಿದ್ದಾರೆ.
