ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭಾರತದ ಮಾಜಿ ಉಪಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ
119ನೇ ಜಯಂತಿ ಹಿನ್ನೆಲೆಯಲ್ಲಿ, ಏಪ್ರೀಲ್ 05 ರಂದು ನಗರದ ಸೆಟ್‌ಲೈಟ್ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಡಾ.ಬಾಬು ಜಗಜೀವನ ರಾಂ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಶಾಸಕರಾದ ವಿಠ್ಠಲ ಕಟಕಧೋಂಡ, ಪಾಲಿಕೆ ಮೇಯರ್ ಮಡಿವಾಳಪ್ಪ ಕರಡಿ, ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದೀನ ಸೌದಾಗರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ, ಸಿಬ್ಬಂದಿ,
ವಿವಿಧ ಸಂಘಟನೆಗಳ ಮುಖಂಡರು,ಸಾರ್ವಜನಿಕರು ಮತ್ತು ಇತರರು ಇದ್ದರು.

