ಉದಯರಶ್ಮಿ ದಿನಪತ್ರಿಕೆ
ಅಥಣಿ: ತಾಲೂಕಿನ ನದಿ ಇಂಗಳಗಾಂವ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಸಹ ಶಿಕ್ಷಕಿಯರಾದ ಶ್ರೀಮತಿ ಅಶ್ವಿನಿ ಬಿಸ್ವಾಗರ ಹತ್ತು ವರ್ಷ ಸೇವೆ ಹಾಗೂ ಶ್ರೀಮತಿ ದೀಪಾ ಹೊಸಮಠ ಅವರ ಹದಿನೆಂಟು ವರ್ಷಗಳ ಸೇವೆಯನ್ನು ಪರಿಗಣಿಸಿ ಜಿಲ್ಲಾ ಮಟ್ಟದ ಸಾವಿತ್ರಿಬಾಯಿ ಪುಲೆ ಅನುಪಮಾ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಇತ್ತೀಚಿಗೆ ಅಥಣಿ ಪಟ್ಟಣದ ರಾಯಲ್ ಫಂಕ್ಷನ್ ಹಾಲನಲ್ಲಿ ನಡೆದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ಹಾಗೂ ಚಿಕ್ಕೋಡಿ ಜಿಲ್ಲೆ ಅಥಣಿ ಘಟಕದ ವತಿಯಿಂದ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಾತೆ ಸಾವಿತ್ರಿಬಾಯಿ ಪುಲೆಯವರ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

