ಆರೋಪಿಗಳ ಬಂಧನಕ್ಕೆ ಚಡಚಣ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘ ಒತ್ತಾಯ
ಉದಯರಶ್ಮಿ ದಿನಪತ್ರಿಕೆ
ಚಡಚಣ: ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಫೋಟೋಗ್ರಾಫರ್ ಮೇಲೆ ನಡೆದ ಹಲ್ಲೆ ಪ್ರಕರಣವು ರಾಜ್ಯದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಗೆ ವಿವಿಧ ಛಾಯಾಚಿತ್ರಗ್ರಾಹಕರ ಸಂಘಗಳು ಖಂಡನೆ ವ್ಯಕ್ತಪಡಿಸಿವೆ.
ಚಡಚಣ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘ (ರಿ.) ಕೂಡ ಈ ಘಟನೆಯನ್ನು ಖಂಡಿಸಿ, ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ.
ಫೋಟೋಗ್ರಾಫರ್‌ಗಳು ತಮ್ಮ ಜೀವನೋಪಾಯಕ್ಕಾಗಿ ದುಡಿದುಕೊಂಡು ಜೀವನಸಾಗಿಸುತ್ತಿರುವ ಈ ಸಂದರ್ಭದಲ್ಲಿ ಅವರ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಅಸಹ್ಯಕರವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಫೋಟೋಗ್ರಾಫರ್‌ಗಳಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಸಂಘ ಒತ್ತಾಯಿಸಿದೆ. ಮತ್ತು ದುಷ್ಕರ್ಮಿಗಳಿಂದ ಹಾನಿಗೋಳಗಾದ ಕ್ಯಾಮರಾ ಸೇರಿದಂತೆ ಇನ್ನಿತರ ಪೀಠೋಪಕರಣಗಳು ದುಷ್ಕರ್ಮಿಗಳಿಂದ ಮರಳಿ ಕೊಡಿಸುವಂತೆ ಆಗ್ರಹಿಸಿದ್ದಾರೆ.
ಈ ಪ್ರಕರಣದ ಕುರಿತು ತ್ವರಿತ ಕ್ರಮ ಕೈಗೊಳ್ಳುವಂತೆ ಚಡಚಣ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘದ ಅಧ್ಯಕ್ಷರಾದ ಸಂಜಯ ರೇವೆ ಹಾಗೂ ಎಲ್ಲ ಪದಾಧಿಕಾರಿಗಳು ತಾಲೂಕಿನ ಫೋಟೊಗ್ರಾಫರಗಳು ಚಡಚಣ ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.

