ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಸೈದ್ದಾಂತಿಕ ನೆಲೆಗಟ್ಟಿನ ಮೇಲೆ ಭಾರತೀಯ ಜನತಾ ಪಕ್ಷವನ್ನು ಕಟ್ಟಿದ ಹಿರಿಯರ ಮಾರ್ಗದರ್ಶನದಲ್ಲಿ ನಾವುಗಳು ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಬೇಕಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.
ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ೪೬ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮಾಜ ಸೇವೆಯ ಗುರಿಯನ್ನು ಹೊಂದಿಕೊಂಡು ಜನರ ಅಭ್ಯುದಯಕ್ಕಾಗಿ, ನಾಡು-ದೇಶದ ಹಿತಕ್ಕಾಗಿ ಹಗಲಿರುಳು ಶ್ರಮಿಸುವ ಹಿರಿಯರು ಹಾಗೂ ಯುವಕರ ಸಮ್ಮಿಲನದಿಂದ ಕೂಡಿದ ಕಾರ್ಯಕರ್ತರನ್ನು ಹೊಂದಿರುವ ಪಕ್ಷವೇ ಬಿಜೆಪಿ ಎಂದು ಹೇಳಿದರು. ಸಮಗ್ರ ದೃಷ್ಟಿಕೋನವನ್ನು ಮನಗಂಡು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತೆ ಕಾರ್ಯನಿರ್ವಹಿಸಿ, ರಾಜಕೀಯ ಕ್ಷೇತ್ರದಲ್ಲಿ ಪಕ್ಷವನ್ನು ಬಲಿಷ್ಠವಾಗಿ ಕಟ್ಟಲು ಯುವಕರು ಮುಂದಾಗಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಪಕ್ಷವನ್ನು ಕಟ್ಟಿದ ಹಿರಿಯರನ್ನು ಸ್ಮರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಮುಖಂಡರಾದ ಮಲ್ಲಿಕಾರ್ಜುನ ದೇವರಮನಿ, ಜಗದೀಶ ಸುನಗದ, ಚಂದ್ರಶೇಖರಯ್ಯ ಗಣಕುಮಾರ, ಚಂದ್ರಶೇಖರ ಬೆಳ್ಳುಬ್ಬಿ, ಪಟ್ಟಣ ಪಂಚಾಯತ್ ಸದಸ್ಯ ಬಾಬು ಭಜಂತ್ರಿ, ಅಮೀನಪ್ಪ ತೆಗ್ಗಿ, ವಿಜಯಕುಮಾರ ಕೊಟ್ಟಗಿ, ಡೋಂಗ್ರಿ ಕಟಬರ, ನಾಮದೇವ ಪವಾರ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು. ಪೂಜೆ ಸಹ ನೆರವೇರಿಸಲಾಯಿತು.
ಇದೇ ಸಂದರ್ಭದಲ್ಲಿ ಕೊಲ್ಹಾರ ಪಟ್ಟಣಕ್ಕೆ ಆಗಮಿಸಿದ ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಸನ್ಮಾನಿಸಲಾಯಿತು.

