ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳ 2026-27ನೇ ಸಾಲಿನ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶಾತಿ ಪ್ರವೇಶ ಪತ್ರಗಳನ್ನು ಬಿಡುಗೊಳಿಸಲಾಗಿದೆ.
ಏ.12 ರಂದು ಪ್ರವೇಶ ಪರೀಕ್ಷೆಗಳು ನಡೆಯಲಿವೆ. ಪ್ರವೇಶ ಪತ್ರಗಳನ್ನು ಅಲ್ಪಸಂಖ್ಯಾತರ : Website :https://erp.dom.karnataka.gov.in/adm/Admission/studentHallticket ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
ಪ್ರತಿ ವಿದ್ಯಾರ್ಥಿಯ ಮೊಬೈಲ್ ಸಂಖ್ಯೆಗೂ ಕೂಡಾ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣಾ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ, ಮೌಲಾನಾ ಆಜಾದ ಭವನ, ಜಿಲ್ಲಾ ಪಂಚಾಯತ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ-586109, ದೂರವಾಣಿ ಸಂಖ್ಯೆ :08352-295523 ಸಂಪರ್ಕಿಸಬಹುದಾಗಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
