ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಆಲಗೂರು ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಏಪ್ರಿಲ್ 14ರ ಸಂಭ್ರಮದ ಅಂಗವಾಗಿ “ಅಂಬೇಡ್ಕರ್ ಅವರ ಕುರಿತು 100 ಅಂಕಗಳ ಸಿಇಟಿ ಮಾದರಿ ಪರೀಕ್ಷೆ” ನಡೆಯಲಿದೆ.
ಪರೀಕ್ಷೆ ಏಪ್ರಿಲ್ 10, 2026ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಹಾಗೂ ಆಸಕ್ತರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಪರೀಕ್ಷೆಯಲ್ಲಿ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ಘೋಷಿಸಲಾಗಿದೆ. ಪ್ರಥಮ ಬಹುಮಾನ ₹500, ದ್ವಿತೀಯ ಬಹುಮಾನ ₹300 ಹಾಗೂ ತೃತೀಯ ಬಹುಮಾನ ₹200 ನಿಗದಿಪಡಿಸಲಾಗಿದೆ.
ಹಾಗೂ ಭಾಗವಹಿಸುವ ಪ್ರತಿಯೊಬ್ಬರೂ ಅಂಬೇಡ್ಕರ್ ಅವರ ಜೀವನ ಹಾಗೂ ಸಾಧನೆಗಳ ಕುರಿತು ತಿಳಿದುಕೊಳ್ಳುವ ಅವಕಾಶವನ್ನು ಪಡೆಯಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.
ಕಾರ್ಯಕ್ರಮದ ಬಹುಮಾನ ದಾನಿಗಳಾಗಿ ಸಾರಿಗೆ ನೌಕರ ಮಹಾದೇವ ಫೋತರಾಜ್ ಅವರು ನೀಡುತ್ತಿದ್ದಾರೆ, ಸ್ಥಳೀಯ ಶಿಕ್ಷಣಾಭಿಮಾನಿಗಳು ಮತ್ತು ಗ್ರಾಮಸ್ಥರು ಕಾರ್ಯಕ್ರಮಕ್ಕೆ ಬೆಂಬಲ ನೀಡಿದ್ದಾರೆ.
ಕಾರ್ಯಕ್ರಮದ ಸಂಘಟಕರಾಗಿ ಶಿಕ್ಷಕ ಆರ್.ಎಸ್. ದೇಸಾಯಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಅಂಬೇಡ್ಕರ್ ಅವರ ಆದರ್ಶಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಬೆಳೆಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಲಾಗಿದೆ.

