Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ಇಲ್ಲ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ಇಲ್ಲ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗ್ರಾಮೀಣ – ನಗರ ಭಾಗದಲ್ಲಿ ಕುಡಿಯುವ ನೀರಿಗೆ ಅನುದಾನದ ಕೊರತೆಯೂ ಇಲ್ಲ | ಜಿಲ್ಲಾಧಿಕಾರಿ ಡಾ. ಆನಂದ ಕೆ. ಸ್ಪಷ್ಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆ ಹಾಗೂ ಕುಡಿಯುವ ನೀರಿಗೆ ಅನುದಾನದ ಕೊರತೆಯಿಲ್ಲ. ಅದರಂತೆ, ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಲ್ಬಣಿಸಬಹುದಾದ ೧೧ ತಾಲೂಕುಗಳ ೩೮ ಗ್ರಾಮ ಪಂಚಾಯತಿ ವ್ಯಾಪ್ತಿಯ ೬೫ ಗ್ರಾಮಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ನೀರಿನ ಯಾವುದೇ ಸಮಸ್ಯೆ ಉಂಟಾಗದAತೆ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಏ.೯ರ ಇದೇ ದಿನ ಆಲಮಟ್ಟಿ ಜಲಾಶಯದಲ್ಲಿ ಕಳೆದ ವರ್ಷ ೨೯.೭೧೨ ಟಿಎಂಸಿ ನೀರಿತ್ತು, ಪ್ರಸ್ತುತ ೩೪.೮೯೫ ಟಿಎಂಸಿ ಅಂದರೆ ಅಂದಾಜು ೫.೧೮೩ ಟಿಎಂಸಿ ನೀರು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿದೆ ತಿಳಿಸಿದರು. ನಾರಾಯಣಪುರ ಜಲಾಶಯದಲ್ಲಿ ಕಳೆದ ವರ್ಷ ೧೯.೫೯೫ ಟಿಎಂಸಿ, ಪ್ರಸ್ತುತ ೨೧.೨೬೯ ಟಿಎಂಸಿ ಅಂದರೆ ಅಂದಾಜು ೧.೬೭೪ ಟಿಎಂಸಿ ನೀರು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿದೆ. ಜಿಲ್ಲೆಯ ಬೇಡಿಕೆಯಂತೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಇಂಡಿ ತಾಲೂಕಿನ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಲುವಾಗಿ ಇಂಡಿ ಶಾಖಾ ಕಾಲುವೆಯಿಂದ ೧.೦೦ ಟಿಎಂಸಿ ನೀರನ್ನು ಏ. ೧೧ ರಿಂದ ಏ. ೨೩ ರವರೆಗೆ (೧೨ ದಿನಗಳು) ನಿತ್ಯ ಒಂದು ಸಾವಿರ ಕ್ಯೂಸೆಕ್ ನಂತೆ ಹರಿಸಲು ಆದೇಶಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ೧೬೦ ಕೆರೆಗಳಿದ್ದು, ಅವುಗಳಲ್ಲಿ ೬೬ ಕೆರೆಗಳು ಶೇ. ೩೦ ರಷ್ಟು , ೪೩ ಕೆರೆಗಳು ಶೇ. ೩೧ ರಿಂದ ೫೦ ರವರೆಗೆ ಹಾಗೂ ೫೧ ಕೆರೆಗಳು ಶೇ. ೫೧ ರಿಂದ ೯೯ ರವರೆಗೆ ಭರ್ತಿಯಾಗಿವೆ ಎಂದರು.
ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ೪೦ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳಿದ್ದು , ಆಲಮಟ್ಟಿ ಜಲಾಶಯದ ಮೇಲೆ ೧೦, ನಾರಾಯಣಪುರ ಜಲಾಶಯದ ಮೇಲೆ ೮, ಭೀಮಾ ನದಿ ಮೂಲಕ ೫ ಹಾಗೂ ಕಾಲುವೆ ಮುಖಾಂತರ ೧೭ ಬಹು ಹಳ್ಳಿ ಕುಡಿಯುವ ನೀರಿನ ಯೋಜನೆ (ಎಂವಿಎಸ್) ಗಳು ಅವಲಂಬಿತವಾಗಿರುತ್ತವೆ. ಈ ಯೋಜನೆಗಳಡಿ ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದರು. ಜಿಲ್ಲೆಯ ನಗರ ಪ್ರದೇಶಗಳಿಗೆ ನರಬರಾಜು ಮಾಡುತ್ತಿರುವ ನೀರಿನ ಮೂಲಗಳಲ್ಲಿ ಪ್ರಸ್ತುತ ಸಾಕಷ್ಟು ನೀರು ಲಭ್ಯವಿರುತ್ತದೆ. ಹಾಗಾಗಿ ಎಲ್ಲಿಯೂ ನೀರಿನ ಸಮಸ್ಯೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಗಳನ್ನು, ತಾಲ್ಲೂಕು ಮಟ್ಟದಲ್ಲಿ ಕಾರ್ಯ ಪಡೆ
(ಟಾಸ್ಕ್ ಫೋರ್ಸ್) ಸಭೆಗಳನ್ನು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮ ಪಂಚಾಯತಿ ವಿಪತ್ತು ನಿರ್ವಹಣಾ ಸಮಿತಿ ಸಭೆಗಳನ್ನು ಜರುಗಿಸಿ ಕುಡಿಯುವ ನೀರಿನ ಯಾವುದೇ ಸಮಸ್ಯೆಯಾಗದಂತೆ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಉಚಿತ ಸಹಾಯವಾಣಿ ಸಂಖ್ಯೆ

ಸಾರ್ವಜನಿಕರು ಕುಡಿಯುವ ನೀರಿನ ಯಾವುದೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಮಟ್ಟದಲ್ಲಿ ಸ್ಥಾಪಿತ ಉಚಿತ ಸಹಾಯವಾಣಿ ಸಂಖ್ಯೆ ೧೦೭೭ ಕ್ಕೆ ಮಾಹಿತಿ ನೀಡಬಹುದಾಗಿದೆ.

” ಗ್ರಾಮೀಣ ಭಾಗದಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ಯಾವುದೇ ನೀರಿನ ಸಮಸ್ಯೆ ಇಲ್ಲ”

– ರಿಷಿ ಆನಂದ
ವಿಜಯಪುರ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026
    In ದಿನಪತ್ರಿಕೆ
  • ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ
    In ಭಾವರಶ್ಮಿ
  • ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
    In (ರಾಜ್ಯ ) ಜಿಲ್ಲೆ
  • ಸಮರ್ಪಕ ನೀರು, ಶುಚಿತ್ವ, ತೆರಿಗೆ ವಸೂಲಿಗೆ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.