Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಡೀ ಸಮಾಜ ಒಂದಾಗಿ ಬಾಳಬೇಕೆಂಬುದೇ ಪಂಚಪೀಠಗಳ ಆಶಯ

ಏ.೧೧ ರಿಂದ ೧೪ ರ ವರೆಗೆ ಅಂಬೇಡ್ಕರ್ ಹಬ್ಬ :ಡಾ.ನಾಯಕ್

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 10, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾರ್ವಜನಿಕರು ಜನಗಣತಿ ಕಾರ್ಯದ ಯಶಸ್ಸಿಗೆ ಕೈ ಜೋಡಿಸಬೇಕು
(ರಾಜ್ಯ ) ಜಿಲ್ಲೆ

ಸಾರ್ವಜನಿಕರು ಜನಗಣತಿ ಕಾರ್ಯದ ಯಶಸ್ಸಿಗೆ ಕೈ ಜೋಡಿಸಬೇಕು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜನಗಣತಿ ಗಣತಿದಾರರು ಮತ್ತು ಮೇಲ್ವಿಚಾರಕರು ಸರಿಯಾದ ರೀತಿಯಲ್ಲಿ ತರಬೇತಿ ಪಡೆದುಕೊಂಡು ಗಣತಿ ಕಾರ್ಯವನ್ನು ಯಶಸ್ವಿಗೊಳಿಸಬೇಕು. ಜೊತೆಗೆ ಸಾರ್ವಜನಿಕರೂ ಜನ ಗಣತಿ ಕಾರ್ಯದ ಯಶಸ್ಸಿಗೆ ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ.ಅವರು ಹೇಳಿದರು. ಜನಗಣತಿಯು ದೇಶದ ಜನಸಂಖ್ಯೆಯ ಗಣತಿಯ ಜೊತೆಗೆ, ದೇಶದ ಸಾಮಾಜಿಕ, ಆರ್ಥಿಕ ಸ್ಥಿತಿಗಳು ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ದಾಖಲಿಸುವ ವೈಜ್ಞಾನಿಕ ಪ್ರಕ್ರಿಯೆಯಾಗಿದ್ದು, ಹಾಗಾಗಿ ಜನಗಣತಿ-೨೦೨೭ರ ಮೇಲ್ವಿಚಾರಕರ ಮತ್ತು ಗಣತಿದಾರರಿಗೆ ಹಮ್ಮಿಕೊಳ್ಳಲಾದ ತರಬೇತಿಯನ್ನು ಸರಿಯಾಗಿ ಪಡೆದುಕೊಂಡು, ಗಣತಿ ಕಾರ್ಯಕ್ಕೆ ತೆರಳಿದಾಗ ಸಾರ್ವಜನಿಕರಿಗೆ ಸೂಕ್ತ ತಿಳಿವಳಿಕೆ ನೀಡಿ, ಗಣತಿ ಕಾರ್ಯಕ್ಕೆ ಒಳಪಡಿಸುವ ಮೂಲಕ ಜನಗಣತಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದ ಅವರು, ಜಿಲ್ಲೆಯ ಜನತೆ ಜನಗಣತಿಯಿಂದ ಹೊರುಗುಳಿಯಬಾದು ಎಂದರು.
ಡಿಜಿಟಲ್‌ಗಣತಿ
ಇದೇ ಮೊದಲ ಬಾರಿಗೆ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯಕ್ಕೆ ಈಗಾಗಲೇ ಚಾಲನೆ ಸಿಕ್ಕಿದೆ.
೨ ಹಂತಗಳಲ್ಲಿ ನಡೆಯಲಿರುವ ಗಣತಿ ಕಾರ್ಯವನ್ನು ಸ್ವತಃ ಗಣತಿದಾರರು ವಿಶೇಷ ಕಾಳಜಿ ವಹಿಸುವ ಮೂಲಕ ಯಶಸ್ವಿಗೊಳಿಸಬೇಕು .ಈಗಾಗಲೇ ಸ್ವಯಂ ಗಣತಿ ಕಾರ್ಯ ಆರಂಭವಾಗಿದೆ. ಜನಗಣತಿಯ ಸುರಕ್ಷಿತ ವೆಬ್ ಪೋರ್ಟಲ್: hಣಣಠಿs://se.ಛಿeಟಿsus.gov.iಟಿ ಗೆ ಮೊಬೈಲ್ ಸಂಖ್ಯೆ ಮತ್ತು ಒಟಿಪಿ ಬಳಸಿ ಲಾಗಿನ್ ಆಗಿ. ಬಳಿಕ ನಿಮ್ಮ ಸ್ಥಳ ಆಯ್ಕೆ ಮಾಡಿ. ನಕ್ಷೆಯಲ್ಲಿ ನಿಮ್ಮ ಮನೆ ಗುರುತಿಸಿ. ಬಳಿಕ ಮನೆಯ ಇಲ್ಲವೇ ಕುಟುಂಬದ ವಿವರ ಭರ್ತಿ ಮಾಡಿ, ನಿಮ್ಮ Sಇ ಖeಜಿeಡಿeಟಿಛಿe Iಆ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದರು.
ನಿಮ್ಮ SಇIಆ ಅನ್ನು ಸುರಕ್ಷಿತವಾಗಿ ಇಟ್ಟು, ಇಟಿumeಡಿಚಿಣoಡಿ ಮನೆಗೆ ಬಂದಾಗ ಅದನ್ನು ಅವರೊಂದಿಗೆ ಹಂಚಿಕೊಳ್ಳಬೇಕು ಎಂದರು. ಏ. ೧೬ ರಿಂದ ಮೇ ೧೫ ರವರೆಗಿನ ಅವಧಿಯಲ್ಲಿ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ವಿವರಗಳನ್ನು ಪರಿಶೀಲಿಸಬೇಕು ಎಂದರು. ಒಂದು ವೇಳೆ ಸಾರ್ವಜನಿಕರು
ಸ್ವಯಂ ಗಣತಿ ಪೂರ್ಣಗೊಳಿಸದಿದ್ದರೆ, ಅಂತವರ ಸ್ವಯಂ ಗಣತಿಯನ್ನು ಗಣತಿದಾರರೇ ಮಾಹಿತಿ ಸಂಗ್ರಹಿಸಿ ಗಣತಿ ಕಾರ್ಯ ಯಶಸ್ವಿಗೊಳಿಸಲಿದ್ದಾರೆ ಎಂದರು. ಈ ಹಂತದಲ್ಲಿ ಸಾರ್ವಜನಿಕರ ಮಾಹಿತಿಯನ್ನು ಶೇ.೧೦೦ರಷ್ಟು ಗೌಪ್ಯತೆ ಇದ್ದು, ಸ್ವಯಂ ಗಣತಿಯನ್ನು ಪೂರ್ಣಗೊಳಿಸುವಂತೆ ಗಣತಿದಾರರಿಗೆ ಸೂಚನೆ ನೀಡಲಾಗಿದೆ. ಆಯಾ ಕುಟುಂಬದ ಮುಖ್ಯಸ್ಥರು ತಮ್ಮ ಕುಟುಂಬದ ಮಾಹಿತಿಯನ್ನು ಯಶಸ್ವಿಯಾಗಿ ಸಲ್ಲಿಸಿದ ನಂತರ, ಅವರಿಗೆ ಒಂದು ವಿಶಿಷ್ಟ ಸ್ವಯಂ-ಗಣತಿ ಐಡಿ (Seಟಜಿ-ಇಟಿumeಡಿಚಿಣioಟಿ Iಆ) ನೀಡಲಾಗುತ್ತದೆ. ಈ ಐಡಿಯನ್ನು ಎಸ್ ಎಂಎಸ್ ಮತ್ತು ಇಮೇಲ್ ಮೂಲಕ ಕಳುಹಿಸಲಾಗುತ್ತದೆ. ಅದನ್ನು ಮನೆಗೆ ಭೇಟಿ ನೀಡುವ ಗಣತಿದಾರರಿಗೆ (ಇಟಿumeಡಿಚಿಣoಡಿ) ಆ ಐಡಿಯನ್ನು ಹಂಚಿಕೊAಡು ಜನಗಣತಿ ಯಶಸ್ವಿಗೊಳಿಸಬೇಕು ಎಂದರು. ಒಂದು ವೇಳೆ ಸಾರ್ವಜನಿಕರು ತಮ್ಮ ಸ್ವಯಂ ಗಣತಿ ಪೂರ್ಣಗೊಳಿಸದಿದ್ದರೆ, ಗಣತಿದಾರರೇ ಮಾಹಿತಿ ಸಂಗ್ರಹಿಸಬೇಕು ಎಂದರು.
ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಯುತ್ತಿದ್ದು,ಇದು ಸಂಪೂರ್ಣ ಡಿಜಿಟಲ್ ಪ್ರಥಮ ಜನಗಣತಿಯಾಗಿದೆ. ದಿನಾಂಕ: ೦೧-೦೪-೨೦೨೬ ರಿಂದ ೧೫-೪-೨೦೨೬ರವರೆಗೆ ಸ್ವಯಂ ಗಣತಿ ಕಾರ್ಯ ಪ್ರಗತಿಯಲ್ಲಿದೆ. ದಿನಾಂಕ:೧೬-೦೪-೨೦೨೬ ರಿಂದ ೧೬-೦೫-೨೦೨೬ ರವರೆಗೆ ಮನೆ ಪಟ್ಟಿ ಕ್ಷೇತ್ರ ಕಾರ್ಯ ನಡೆಇದೆ.ಎರಡನೇ ಹಂತದಲ್ಲಿ ಫೆಬ್ರವರಿ ೨೦೨೭ ರಿಂದ ಜನಸಂಖ್ಯಾ ಗಣತಿ ಕಾರ್ಯ ನಡೆಯಲಿದೆ ಎಂದು ಹೇಳಿದರು. ಜನಗಣತಿ ಸಲುವಾಗಿ ಬ್ಲಾಕ್ ರಚಿಸಲಾಗುತ್ತಿದ್ದು, ೧೫೦ ರಿಂದ ೨೦೦ ಮನೆಗಳು ಅಥವಾ ೭೦೦ ರಿಂದ ೮೦೦ ಜನಸಂಖ್ಯೆಗನುಗುಣವಾಗಿ ಓರ್ವ ಗಣತಿದಾರರನ್ನು ಪ್ರತಿ ೬ ಜನ ಗಣತಿದಾರರಿಗೆ ಓರ್ವ ಮೇಲ್ವಿಚಾರಕರನ್ನು ನೇಮಿಸಲಾಗುವುದು. ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲಿ ೨೮೪೬, ನಗರ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ೬೨೪ ಹಾಗೂ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ೫೬೫ ಬ್ಲಾಕ್ ಸೇರಿದಂತೆ ಒಟ್ಟಾರೆ ಜಿಲ್ಲೆಯಲ್ಲಿ ೪,೦೩೫ ಬ್ಲಾಕ್ ಗಳ ರಚನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೪೪೦೫ ಗಣತಿದಾರರನ್ನು ಹಾಗೂ ೭೬೭ ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದು ಹೇಳಿದರು.ಜನಗಣತಿ ಅಧಿಕಾರಿಯು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಸರಿಯಾದ ಮಾಹಿತಿ ನೀಡುವ ಮೂಲಕ ಸಹಕರಿಸುವಂತೆಯೂ ಹಾಗೂ ಜಿಲ್ಲೆಯಲ್ಲಿ ಭಾರತ ಜನಗಣತಿ ೨೦೨೭ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಜಿಪಂ ಸಿಇಓ ರಿಷಿ ಆನಂದ್ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಡೀ ಸಮಾಜ ಒಂದಾಗಿ ಬಾಳಬೇಕೆಂಬುದೇ ಪಂಚಪೀಠಗಳ ಆಶಯ

ಏ.೧೧ ರಿಂದ ೧೪ ರ ವರೆಗೆ ಅಂಬೇಡ್ಕರ್ ಹಬ್ಬ :ಡಾ.ನಾಯಕ್

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 10, 2026

ನೀರಿನ ಹೊಂಡಕ್ಕೆ ಬಿದ್ದ ಯುವಕ ಸಾವು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಡೀ ಸಮಾಜ ಒಂದಾಗಿ ಬಾಳಬೇಕೆಂಬುದೇ ಪಂಚಪೀಠಗಳ ಆಶಯ
    In (ರಾಜ್ಯ ) ಜಿಲ್ಲೆ
  • ಏ.೧೧ ರಿಂದ ೧೪ ರ ವರೆಗೆ ಅಂಬೇಡ್ಕರ್ ಹಬ್ಬ :ಡಾ.ನಾಯಕ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 10, 2026
    In ದಿನಪತ್ರಿಕೆ
  • ನೀರಿನ ಹೊಂಡಕ್ಕೆ ಬಿದ್ದ ಯುವಕ ಸಾವು
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಸಂಸ್ಥೆ ಎಸ್.ಎಸ್.ಪಿಯು ಕಾಲೇಜ್ ವಿದ್ಯಾರ್ಥಿಗಳು ರಾಜ್ಯಕ್ಕೆ ೨ನೇ, ೩ನೇ & ೪ನೇ ಸ್ಥಾನ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಯುಗಕ್ಕೆ ಡಿಜಿಟಲ್ ವೇದಿಕೆ, ಆನ್‌ಲೈನ್ ಶಿಕ್ಷಣ ಹೊಸ ಆಯುಧ
    In (ರಾಜ್ಯ ) ಜಿಲ್ಲೆ
  • ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಶೇ.68 ಕ್ಕೂ ಹೆಚ್ಚು ಮತದಾನ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಪ.ಪೂ ಕಾಲೇಜ್: ಶೇ೯೯.೫೮ ಫಲಿತಾಂಶ, ೪೩೮ ಡಿಷ್ಟಿಂಕ್ಷನ್
    In (ರಾಜ್ಯ ) ಜಿಲ್ಲೆ
  • ಏ.೧೦ ರಂದು ಬೇಸಿಗೆ ತರಬೇತಿ ಶಿಬಿರ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಪಬ್ಲಿಕ್ ಶಾಲೆ: ಎಲ್‌ಕೆಜಿ-ಯುಕೆಜಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.