ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಎಸ್. ಪಿಯು ಕಾಲೇಜಿನ ಮೂರು ಜನ ವಿದ್ಯಾರ್ಥಿಗಳು ರಾಜ್ಯಕ್ಕೆ ದ್ವಿತೀಯ, ತೃತೀಯ ಮತ್ತು ನಾಲ್ಕನೇ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿನಿ ಸಾನಿಕಾ ಮೆಟಗಾರ ಕಲಾ ವಿಭಾಗದಲ್ಲಿ 595 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದರೆ, ಅಕ್ಷತಾ ಚವ್ಹಾಣ 594 ಅಂಕ ಪಡೆದು ರಾಜ್ಯಕ್ಕೆ ತೃತೀಯ ಹಾಗೂ ಯುವರಾಜ ಬಗಲಿ 593 ಅಂಕ ಪಡೆದು ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ, ಆಡಳಿತಾಧಿಕಾರಿ ಐ. ಎಸ್. ಕಾಳಪ್ಪನವರ, ಕಾಲೇಜಿನ ಪ್ರಾಚಾರ್ಯ ಜಿ. ಡಿ. ಅಕಮಂಚಿ ಮತ್ತು ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ, ಅವರ ಮುಂದಿನ ಶಿಕ್ಷಣಕ್ಕೆ ಶುಭ ಹಾರೈಸಿದ್ದಾರೆ.

