ಉದಯರಶ್ಮಿ ದಿನಪತ್ರಿಕೆ
ಕಲಕೇರಿ: ಗ್ರಾಮದ ಎಂ.ಡಬ್ಲೂ.ಎಮ್.ಎಸ್ ಮತ್ತು ಆರ್.ಎಸ್.ಡಬ್ಲು ಟ್ರಸ್ಟ್ನ ಅಡಿಯಲ್ಲಿ ನಡೆಯುತ್ತಿರುವ ಎ. ಕೆ. ಸಿರಸಗಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ೨೦೨೬ನೇ ಸಾಲಿನ ದ್ವಿತೀಯ ಪಿಯುಸಿ ಕಲಾ ಮತ್ತು ವಿಜ್ಞಾನ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಕು. ಮಹ್ಮದ ಯಾಸೀನ ಹೊನ್ನಳ್ಳಿ ೫೭೮ (೯೬.೩೩%) ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದು, ಕುಮಾರಿ ಶಾರದಾ ಬಿ. ೫೬೯ (೯೪.೮೩%) ದ್ವಿತೀಯ ಸ್ಥಾನ ಹಾಗೂ ಕುಮಾರಿ ತಮನ್ನಾ ಜೆ. ೫೬೫ (೯೪.೧೬%) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಪರೀಕ್ಷೆಗೆ ಕುಳಿತ ೩೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದು, ವಿದ್ಯಾರ್ಥಿ ಗಳು ಹೆಚ್ಚಿನ ಅಂಕಗಳೊಂದಿಗೆ ತೇರ್ಗಡೆಯಾಗಿರುವುದರಿಂದ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಕಾಲೀಜಿನ ಸಿಬ್ಬಂದಿವರ್ಗ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

