ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಪಟ್ಟಣದ ವಿಶ್ವಭಾರತಿ ವಿದ್ಯಾವರ್ಧಕ ಸಂಸ್ಥೆಯ ಎಸ್.ಕೆ. ಬೆಳ್ಳುಬ್ಬಿ ವಿಜ್ಞಾನ ಪಿಯು ಕಾಲೇಜಿನಲ್ಲಿ ಈ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ದಾಖಲಾಗಿದೆ.
ವಿಜ್ಞಾನ ವಿಭಾಗದಲ್ಲಿ ಪ್ರತಿಭಾ ಡೆಂಗಿ ಅವರು ಶೇಕಡಾ 97 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಗಳಿಸಿದ್ದು, ದಾನಮ್ಮ ಹಿರೇಮಠ ಅವರು ಶೇಕಡಾ 96.25 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಸುಮಿತ್ರಾ ವಂದಾಲ ಅವರು ಶೇಕಡಾ 93.25 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ಒಟ್ಟು 25 ವಿದ್ಯಾರ್ಥಿಗಳಲ್ಲಿ 13 ಮಂದಿ ಡಿಸ್ಟಿಂಕ್ಷನ್, 11 ಮಂದಿ ಪ್ರಥಮ ದರ್ಜೆ ಹಾಗೂ 1 ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಿಕ್ಷಕರ ಕರ್ತವ್ಯನಿಷ್ಠೆಗೆ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಸಂ. ಬೆಳ್ಳುಬ್ಬಿ ಹಾಗೂ ಆಡಳಿತ ಮಂಡಳಿಯವರು, ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು ಸಂತೋಷ ವ್ಯಕ್ತಪಡಿಸಿದ್ದಾರೆ.

