ಉದಯರಶ್ಮಿ ದಿನಪತ್ರಿಕೆ
ಅಥಣಿ: ಮಹಿಳೆಯರ ಸುರಕ್ಷತೆ ಹಾಗೂ ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ‘ಅಕ್ಕಪಡೆ’ (ಮಹಿಳಾ ಪೊಲೀಸ್ ತಂಡದ) ವತಿಯಿಂದ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಕಿರುಕುಳ ತಡೆಗಟ್ಟಲು ಮತ್ತು ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸಲು ನಿಟ್ಟಿನಲ್ಲಿ ಈ ಅಭಿಯಾನವನ್ನು ನಡೆಸಲಾಯಿತು.
ತುರ್ತು ಸಂದರ್ಭಗಳಲ್ಲಿ ಮಹಿಳೆಯರು ನೆರವು ಪಡೆಯಲು 112 ಸಹಾಯವಾಣಿಗೆ ಕರೆ ಮಾಡುವಂತೆ ಕ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಿದರು.
ಪ್ರಯಾಣಿಕರ ಲಗೇಜುಗಳ ಭದ್ರತೆ, ಅಪರಿಚಿತರು ನೀಡುವ ತಿಂಡಿ-ತಿನಿಸುಗಳನ್ನು ಸೇವಿಸನೆ. ಅನುಮಾನಾಸ್ಪದ ವ್ಯಕ್ತಿಗಳು ಓಡಾಟ. ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿಯನ್ನ ಅಕ್ಕಾ ಪಡೆಯ ತಂಡದ ಸದಸ್ಯರು ಮಾಡಿದ್ರು.
ಮಹಿಳೆಯರು ಮತ್ತು ಮಕ್ಕಳು ಸಾರ್ವಜನಿಕ ಸ್ಥಳಗಳಲ್ಲಿ ನಿರ್ಭಯವಾಗಿ ಸಂಚರಿಸಬೇಕು. ಯಾವುದೇ ತೊಂದರೆಯಾದಲ್ಲಿ ಸಂಕೋಚ ಪಡದೆ ಅಕ್ಕಪಡೆಯನ್ನು ಅಥವಾ ಹತ್ತಿರದ ಪೊಲೀಸ್ ಸಿಬ್ಬಂದಿಯನ್ನು ಸಂಪರ್ಕಿಸಬೇಕು ಎಂದು ತಂಡದ ಅಧಿಕಾರಿಗಳು ಈ ಸಂದರ್ಭದಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹಾಗೂ ನೂರಾರು ಪ್ರಯಾಣಿಕರು ಉಪಸ್ಥಿತರಿದ್ದರು.
ಅಕ್ಕಪಡೆಯ ಸದಸ್ಯರಾದ
ಭೀಮಪ್ಪ ಉಗಾರೆ, ಜ್ಯೋತಿ ಬೆಕ್ಕೇರಿ,ಕವಿತಾ ಕಾಡಗೌಡರ ತಂಡದಿಂದ ಈ ಅರಿವು ಮೂಡಿಸುವ ಕಾರ್ಯಕ್ರಮ ಜರುಗಿತು.

