Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ
(ರಾಜ್ಯ ) ಜಿಲ್ಲೆ

ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ೨೦೨೫-೨೬ನೇಯ ಸಾಲಿನಲ್ಲಿ ಸಿಇಟಿ/ನಿಟ್ ತರಬೇತಿಗಾಗಿ ಬೆಂಗಳೂರಿನ ಎಕ್ಷೆಲ್ ಅಕಾಡೆಮಿಯ ಸಹಯೋಗದೊಂದಿಗೆ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿಯನ್ನು ನೀಡಲಾಗಿದೆ. ಪ್ರಸ್ತುತ ವಿದ್ಯಾರ್ಥಿಗಳು ಪರೀಕ್ಷಾ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ ಹೇಳಿದರು.
ಸಿಂದಗಿ ಪಟ್ಟಣದ ಆರ್.ಡಿ.ಪಾಟೀಲ ಕಾಲೇಜಿನಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತ ಸಾಲಿನಲ್ಲಿ ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲೂ ಉತ್ತಮ ಸಾಧನೆ ಮಾಡಿದ್ದಾರೆ. ಗಣೇಶ ಬಿರಾದಾರ ಎಂಬ ವಿದ್ಯಾರ್ಥಿ ೬೦೦ ಅಂಕಗಳಿಗೆ ೫೮೮ ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಜಿಲ್ಲೆಗೆ ೭ನೆಯ ಸ್ಥಾನ ಪಡೆದುಕೊಂಡು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾನೆ. ಕಾಲೇಜಿನ ಒಟ್ಟು ಫಲಿತಾಂಶ ಶೇ.೯೪.೨೪ರಷ್ಟಾಗಿದೆ. ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕವಾಗಿ ಅಷ್ಟೇ ಅಲ್ಲದೇ ರೇಂಜರ್ ವಿವಿಧ ಕ್ರೀಡೆಗಳಲ್ಲಿಯೂ ಭಾಗವಹಿಸುವ ಮೂಲಕ ತಾಲೂಕು, ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದವರೆಗೂ ಸಾಧನೆ ಮಾಡಿದ್ದಾರೆ. ಬೆಲ್ಟ್ಕುಸ್ತಿಯಲ್ಲಿ ಗಣೇಶ ಎಂಬ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ಸ್ಪರ್ಧಿಸಿ ೩ನೆಯ ಸ್ಥಾನ ಪಡೆದುಕೊಂಡು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾನೆ ಎಂದರು.
ಈ ವೇಳೆ ಶ್ರೀ ಪದ್ಮರಾಜ ಮಹಿಳಾ ಪಪೂ ಕಾಲೇಜಿನ ಪ್ರಾಚಾರ್ಯ ವ್ಹಿ.ಡಿ.ಪಾಟೀಲ ಮಾತನಾಡಿ, ಶೈಕ್ಷಣಿಕ ಸಾಧನೆಯ ಜೊತೆಗೆ ಮಹಿಳಾ ಪಪೂ ಕಾಲೇಜಿನ ವಿದ್ಯಾರ್ಥಿನಿಯರು ಕ್ರೀಡೆಯಲ್ಲಿಯೂ ಸಹ ತಾಲೂಕು, ಜಿಲ್ಲಾ, ರಾಜ್ಯ, ರಾಷ್ಟç ಮಟ್ಟದವರೆಗೂ ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡಿ ಮೇಲುಗೈ ಸಾಧಿಸುತ್ತಿದ್ದಾರೆ. ಅದರಲ್ಲಿ ರಜಿಯಾಬೇಗಂ ಮ್ಯಾಗೇರಿ ಎನ್ನುವ ವಿದ್ಯಾರ್ಥಿನಿ ವ್ಹಾಲಿಬಾಲ್ ಪಂದ್ಯಾವಳಿಯಲ್ಲಿ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿ, ಝಾರ್ಖಂಡ ರಾಜ್ಯದಲ್ಲಿ ನಡೆಯುವ ಅಂತರ್‌ರಾಷ್ಟ್ರೀಯ ವ್ಹಾಲಿಬಾಲ್ ತಂಡಕ್ಕೆ ಆಯ್ಕೆಯಾಗಲು ತರಬೇತಿಗಾಗಿ ಮಹಾವಿದ್ಯಾಲಯ ವತಿಯಿಂದ ಕಳುಹಿಸಿಕೊಡಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಕಾಲೇಜಿಗೆ ಪ್ರಥಮ ಹಾಗೂ ಜಿಲ್ಲೆಗೆ ೭ನೆಯ ಸ್ಥಾನ ಪಡೆದ ವಿದ್ಯಾರ್ಥಿ ಗಣೇಶ ಬಿರಾದಾರ ಹಾಗೂ ವಾಣಿಜ್ಯ ವಿಭಾಗದ ಸುಪ್ರಿತಾ ಮಾವೂರ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ವೇಳೆ ವಿಶ್ವನಾಥ ನಂದಿಕೋಲ, ಪಿ.ವ್ಹಿ.ಮಹಲಿನಮಠ, ಎಸ್.ಎಚ್.ಜಾದವ್, ಬಿ.ಬಿ.ಜಮಾದಾರ, ಪ್ರಸನ್ನಕುಮಾರ ಜೋಗುರ, ಜಿ.ಎ.ನಂದಿಮಠ, ನವೀನ ಶೆಳ್ಳಗಿ, ಚಂದ್ರು ಬಬಲೇಶ್ವರ ಸೇರಿದಂತೆ ಇತರರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ
    In (ರಾಜ್ಯ ) ಜಿಲ್ಲೆ
  • ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ
    In (ರಾಜ್ಯ ) ಜಿಲ್ಲೆ
  • ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ನಾಲತವಾಡ ಸರಕಾರಿ ಐಟಿಐ ಸಂಸ್ಥೆ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಥಣಿಯಲ್ಲಿ ’ಅಕ್ಕಪಡೆ’ ಯಿಂದ ವಿಶೇಷ ಜಾಗೃತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.