ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ರಸ್ತೆ ಬದಿಗೆ ಉರುಳಿದ ಸಾರಿಗೆ ಬಸ್, ೧೬ ಜನ ಪ್ರಯಾಣಿಕರಿಗೆ ಗಾಯ
ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ರಸ್ತೆ ಬದಿಗೆ ಉರುಳಿದ ಪರಿಣಾಮ ೧೬ ಜನ ಪ್ರಯಾಣಿಕರು ಗಾಯಗೊಂಡ ಘಟನೆ ಪಟ್ಟಣದ ಮುಳವಾಡ ಕಾಲುವೆ ಬಳಿಯ ತಿರುವಿನಲ್ಲಿ ಸಂಭವಿಸಿದೆ.
ಪಟ್ಟಣದ ಬಸವನ ಬಾಗೇವಾಡಿ ರಸ್ತೆಯಲ್ಲಿನ ಮುಳವಾಡ ಏತ ನೀರಾವರಿ ಕಾಲುವೆಯ ಬಳಿ ತಿರುವಿನಲ್ಲಿ ಸೋಮವಾರ ಬಸವನಬಾಗೇವಾಡಿಯಿಂದ ದೇವರಹಿಪ್ಪರಗಿಗೆ ಬರುತ್ತಿದ್ದ ಬಸವನ ಬಾಗೇವಾಡಿ ಘಟಕಕ್ಕೆ ಸೇರಿದ ಸಾರಿಗೆ ಬಸ್(ಕೆ.ಎ.೨೮ ಎಫ್ ೧೯೫೮) ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಪರಿಣಾಮ ೧೬ ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಗೊಂಡವರಿಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚು ಗಾಯಗೊಂಡ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗೆ ಸಿಂದಗಿ ಹಾಗೂ ವಿಜಯಪುರ ಸರ್ಕಾರಿ ಆಸ್ಪತ್ರೆಗೆ ಕಳಿಸಲಾಗಿದೆ.
ಅಪಘಾತದ ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸ್‌ರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

