ವಿಜಯಪುರದ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಧಿವತ್ತಾಗಿ ಪೂಜೆ ಸಲ್ಲಿಸಿ, ಪುಷ್ಪವೃಷ್ಠಿಗೈದು, ಡಾ.ಅಂಬೇಡ್ಕರ ಅವರ ಸಮಾಜ ಪರಿವರ್ತನೆಯ ಚಿಂತನೆಗಳು, ಶ್ರಮ ಮತ್ತು ಸಮಾನತೆಯ ಮಹತ್ವವನ್ನು ಸ್ಮರಿಸಲಾಯಿತು.
ಸಂಘದ ಅಧ್ಯಕ್ಷ ಅಶೋಕ ಯಡಳ್ಳಿ ಮಾತನಾಡಿ,
ಅಂಬೇಡ್ಕರ್ ಅವರು ಕೇವಲ ಸಂವಿಧಾನ ಶಿಲ್ಪಿಯಾಗಿರದೆ, ಒಬ್ಬ ಚಿಂತಕ ಪತ್ರಕರ್ತರೂ ಆಗಿದ್ದರು. ‘ಮೂಕನಾಯಕ’ ಮತ್ತು ‘ಬಹಿಷ್ಕೃತ ಭಾರತ’ ಪತ್ರಿಕೆಗಳ ಮೂಲಕ ಹಿಂದುಳಿದ ವರ್ಗಗಳ ಧ್ವನಿಯಾಗಿ ಕಾರ್ಯನಿರ್ವಹಿಸಿ, ಸಮಾಜದಲ್ಲಿ ಜಾಗೃತಿ ಮೂಡಿಸಿದರು ಎಂದರು.
ಅಂಬೇಡ್ಕರ್ ರಚಿಸಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ನೀಡುತ್ತದೆ. ಪತ್ರಕರ್ತರಾಗಿ ನಾವು ಈ ಮೌಲ್ಯಗಳನ್ನು ಕಾಪಾಡುವುದು ನಮ್ಮ ಪ್ರಮುಖ ಜವಾಬ್ದಾರಿ,” ಎಂದು ಹೇಳಿದರು.
ಜಿಲ್ಲಾ ಪ್ರದಾನ ಕಾರ್ಯದರ್ಶಿ ಇಂದುಶೇಖರ ಮಣೂರ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ ಅವರ ಜಯಂತ್ಯತ್ಸವ ಆಚರಿಸಿದರೆ ಸಾಲದು. ಅವರ ತತ್ವ-ಸಿದ್ಧಾಂತಗಳನ್ನು ನಾವೆಲ್ಲ ಬದುಕಿನಲ್ಲಿ ಅಳವಡಿಸಿಕೊಂಡರೆ ಮಾತ್ರ ಜಯಂತಿಗೆ ಸಾರ್ಥಕತೆ ಸಿಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ
ನಗರದ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಖಜಾಂಚಿ ರಾಹುಲ್ ಆಪ್ಟೆ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಚಿದಂಬರ ಕುಲಕರ್ಣಿ, ಹಣಮಂತ ಕಾರಕೂರ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

