ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ನಗರದ ಸರ್ಕಾರಿ ಆದರ್ಶ ವಿದ್ಯಾಲಯದ ಶಿಕ್ಷಕ ರಮೇಶ ಚಟ್ಟರಕಿ ಅವರನ್ನು ಶಾಲಾ ಶಿಕ್ಷಣ ಇಲಾಖೆ ಉಪ-ನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ತಮಗೆ ಬೇಕಾಗಿರುವ ಪರೀಕ್ಷಾ ಕೇಂದ್ರ ಹಾಕಿಸಿ ಕೊಡುವ ವಿಚಾರವಾಗಿ ವಿದ್ಯಾರ್ಥಿಗಳಿಂದ ಹಣ ಪಡೆದ ವಿಚಾರವಾಗಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿರುವ ಆಡಿಯೊ ಸಾಮಾಜಿಕ ಜಾಲತಾಣ ಹಾಗೂ ಸುದ್ಧಿವಾಹಿನಿಗಳಲ್ಲಿ ಹರಿದಾಡಿದ್ದು ಗಮನಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಮಯದಲ್ಲಿ ವಿನಾಕಾರಣ ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿ ಮಾಡುವ ಮೂಲಕ ಶಿಕ್ಷಕರಿಗೆ ಸರಿಯಲ್ಲದ ರೀತಿಯಲ್ಲಿ ವರ್ತನೆ ಮಾಡಿರುವುದು ಮೇಲ್ನೊಟಕ್ಕೆ ಕಂಡ ಬಂದ ದಿಸೆಯಲ್ಲಿ ಈ ವಿಷಯ ಇಲಾಖೆಗೆ ಮುಜಗರ ಉಂಟು ಮಾಡಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಯಡ್ರಾಮಿ ಅವರು ಸ್ಪಷ್ಟ ಅಭಿಪ್ರಾಯವನ್ನು ಕಾರ್ಯಾಲಯಕ್ಕೆ ಸಲ್ಲಿಸಿದ್ದಾರೆ. ಆರೋಪಗಳ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪ-ನಿರ್ದೇಶಕರು ಆದೇಶಿಸಿದ್ದಾರೆ.
