ಸಿಂದಗಿ ಪಟ್ಟಣದ ವಿವಿಧೆಡೆ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರು ನೀಡಿದ ಅದ್ಭುತ ಸಂದೇಶಗಳು, ಇಂದಿಗೂ ಸಹ ಜನಜನಿತವಾಗಿದ್ದು, ಸಂದೇಶಗಳನ್ನು ಪಾಲಿಸುವ ಪ್ರತಿ ಪ್ರಜೆಯೂ ಜೀವನದಲ್ಲಿ ಎಂದೂ ಕುಗ್ಗಲಾರ ಎಂದು ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಹೇಳಿದರು.
ಸಿಂದಗಿ ಪಟ್ಟಣದ ರಾಂಪೂರ ರಸ್ತೆಯಲ್ಲಿರುವ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ರವರ ೧೩೫ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತಕ್ಕೆ ಬಾಬಾಸಾಹೇಬರು ನೀಡಿದ ಕೊಡುಗೆ ಅನನ್ಯ. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕು ಸಾಗಿಸಬೇಕು. ಅವರ ತತ್ವ ಸಿದ್ಧಾಂತದ ಮೇಲೆ ನಾವೆಲ್ಲರೂ ನಡೆಯಬೇಕು ಎಂದರು.
ಈ ಸಮಾರಂಭದಲ್ಲಿ ಸಂಸ್ಥೆಯ ನಿರ್ದೇಶಕ ಪಿ.ಡಿ.ಕುಲಕರ್ಣಿ, ಶಾಲೆಯ ಮುಖ್ಯ ಗುರುಮಾತೆ ಎಸ್.ಆಯ್.ಅಸ್ಕಿ, ಎಮ್.ಪಿ.ಬುಕ್ಕಾ, ಶಿಕ್ಷಕರಾದ ಸತೀಶ ಕುಲಕರ್ಣಿ, ಅಲ್ತಾಫ್ ತಾಂಬೋಳಿ, ಕಿರಣ ಕುಲಕರ್ಣಿ, ಸಂತೋಷ ಕುಂಟೋಜಿ, ಅಕ್ಷಯ ಯಲಗಟ್ಟಿ, ಶ್ರೀಕಾಂತ ಹೂನಳ್ಳಿ ಮತ್ತು ಬಿ.ಎಸ್.ಪಾಟೀಲ, ಎಸ್.ವಿ.ಕಡಣಿ, ಎಮ್.ಎಮ್.ಜುಮನಾಳ, ಎಮ್.ಜಿ. ಧ್ಯಾಮಗೊಂಡ, ವಿ.ಎ.ನಾಯಕ, ಎಮ್.ಜಿ.ಬಳಗಾನೂರ, ಶಿಲ್ಪಾ ಎಸ್.ಪಾಟೀಲ, ವಿ.ಎ.ನಾಯಕ, ವಿಜಯಲಕ್ಷ್ಮಿ ಅಲಾಳಮಠ, ರೂಪಾ ಶಿವಸಿಂಪಿಗೇರ, ಸಾವಿತ್ರಿ ವಿರಾಪೂರ, ಆರ್.ಎಮ್. ಪಕೀರಪುರ ಸೇರಿದಂತೆ ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿಗಳು ಇದ್ದರು.
ಶ್ರೀ ಪದ್ಮರಾಜ ಮಹಿಳಾ ಕಾಲೇಜು
ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತ್ಯೋತ್ಸವ ಆಚರಣೆ ಮಾಡಲಾಯಿತು.
ಈ ವೇಳೆ ಪ್ರಾಚಾರ್ಯ ವ್ಹಿ.ಡಿ.ಪಾಟೀಲ, ಯು.ಸಿ.ಪೂಜೇರಿ, ಮಮತಾ ಹರನಾಳ, ವಿಜಯಲಕ್ಷ್ಮಿ ಭಜಂತ್ರಿ, ಶಂಕರ ಕುಂಬಾರ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರ
ಪಟ್ಟಣದ ಬಂದಾಳ ರಸ್ತೆಯಲ್ಲಿರುವ ಮಹಿಳಾ ಸಾಂತ್ವಾನ ಸಹಾಯವಾಣಿ ಕೇಂದ್ರದಲ್ಲಿ ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತ್ಯೋತ್ಸವ ಆಚರಣೆ ಮಾಡಲಾಯಿತು.
ಈ ವೇಳೆ ಸಮಾಜ ಕಾರ್ಯಕರ್ತೆ ರಶ್ಮಿ ನೂಲಾನವರ, ವಿದ್ಯಾ ದೇಸಾಯಿ ಇದ್ದರು.
ಆರ್.ಡಿ.ಪಾಟೀಲ ಕಾಲೇಜು
ಪಟ್ಟಣದ ಆರ್.ಡಿ.ಪಾಟೀಲ ಪಪೂ ಮಹಾವಿದ್ಯಾಲಯದಲ್ಲಿ ವತಿಯಿಂದ ಹಮ್ಮಿಕೊಂಡ ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತ್ಯೋತ್ಸವ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಉಪನ್ಯಾಸಕರಾದ ಎನ್.ಬಿ.ಪೂಜಾರಿ, ಎಸ್.ಎಚ್.ಜಾಧವ, ವ್ಹಿ.ಪಿ.ನಂದಿಕೋಲ, ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಇದ್ದರು.

