ಉದಯರಶ್ಮಿ ದಿನಪತ್ರಿಕೆ
ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಅನುಧಾನಿತ ಬಸವೇಶ್ವರ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಡಶಾಲೆ, ಪ್ರಾಥಮಿಕ ಶಾಲೆ, ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135 ನೇ ಜಯಂತ್ಯೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ ಮಹಾನ್ ಮಾನವತಾವಾದಿ, ಭಾರತ ರತ್ನ, ಜ್ಞಾನ ಸೂರ್ಯ ಡಾ.ಬಿ ಆರ್ ಅಂಬೇಡ್ಕರ್ ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೋಬ್ಬರು ಮೈಗೂಡಿಸಿಕೊಳ್ಳಬೇಕಿದೆ ಎಂದು ಹೆಳಿದರು.
ಬಸವೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಬಿ ಜಿ ಚನಗೊಂಡ, ಪದವಿ ಕಾಲೇಜಿನ ಪ್ರಾಚಾರ್ಯ ಜಗದೀಶ ಕಾದಳ್ಳಿ, ಶಿವಾನಂದ ಹರಿಜನ್ ಮಾತನಾಡಿರು.
ಕಾರ್ಯಕ್ರಮದಲ್ಲಿ ಎಸ್ ಬಿ ಪಾಟೀಲ, ನಿಂಗನಗೌಡ ಗುಂಡಕನಾಳ, ವಿಶ್ವನಾಥ ಸಿಂದಗಿ, ರವಿಕುಮಾರ ಗುಮಶೆಟ್ಟಿ, ಆರ್ ವ್ಹಿ ಕುಲಕರ್ಣಿ, ಐ ಎಂ ಝಳಕಿ ಸೇರಿದಂತೆ ಕಾಲೇಜಿನ ವಿಧ್ಯಾರ್ಥಿಗಳು ಹಾಗೂ ಭೋದಕ,ಭೋದಕೇತರ ಸಿಬ್ಬಂದ್ದಿ ಹಾಜರಿದ್ದರು.

