Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಗ್ಗೆ-ಮಳಲಿ ಮಧ್ಯೆ ತಲೆಯೆತ್ತುತ್ತಿದ್ದ ಕಟ್ಟಡ ಕಾಮಗಾರಿ ಸ್ಥಗಿತ

ಮಿರಗಿ ಗೋಳಸಾರ ಗ್ರಾಮದ ಹಳ್ಳಕ್ಕೆ ನೀರು ಹರಿಸಲು ಪ್ರತಿಭಟನೆ

ಇಂಡಿ ಉಪನೋಂದಣಾಧಿಕಾರಿಗಳ ವರ್ತನೆಗೆ ಸಾರ್ವಜನಿಕರ ಬೇಸರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು :ಡಿಸಿ ಡಾ.ಆನಂದ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು :ಡಿಸಿ ಡಾ.ಆನಂದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದ್ವಿತೀಯ ಪಿಯುನಲ್ಲಿ ವಿಜಯಪುರ ಜಿಲ್ಲೆಗೆ ಕ್ರಮವಾಗಿ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ರಿಂದ ಸನ್ಮಾನ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿದ್ಯಾರ್ಥಿಗಳು ಸತತ ಅಧ್ಯಯನಶೀಲರಾದಾಗ ಮಾತ್ರ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಉನ್ನತ ಜೀವನ ನಡೆಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸರಳ ಸಮಾರಂಭದಲ್ಲಿ ೨೦೨೬ರ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಜಿಲ್ಲೆಗೆ ಕ್ರಮವಾಗಿ ಸ್ಥಾನ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲಾಡಳಿತದಿಂದ ಸನ್ಮಾನಿಸಿ ಅವರು ಮಾತನಾಡಿದರು.
ಈ ದಿಸೆಯಲ್ಲಿ ವಿದ್ಯಾರ್ಥಿಗಳು ಆಯಾ ಶೈಕ್ಷಣಿಕ ವರ್ಷಾರಂಭದಿಂದಲೇ ಆಸಕ್ತಿಯಿಂದ ಓದಲಾರಂಭಿಸಿದರೆ ಪರೀಕ್ಷೆ ಯಶಸ್ಸು ನೀರು ಕುಡಿದಷ್ಟೇ ಸುಲಭವಾಗುತ್ತದೆ ಎಂದರು.
ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಠಿಣ ಅಧ್ಯಯನ ಶೈಲಿ ರೂಢಿಸಿಕೊಳ್ಳಬೇಕು. ವಿಷಯ ಕರಗತ ಮಾಡಿಕೊಂಡು ಮನನ ಮಾಡಿಕೊಳ್ಳುವ ಮೂಲಕ ತಮ್ಮನ್ನು ತಾವು ಮೌಲ್ಯಮಾಪನಕ್ಕೊಳಡಿಸಿ ಕೊಂಡರೆ, ಓದಿದ್ದೆಲ್ಲವೂ ಸ್ಮೃತಿಪಟಲದಲ್ಲಿ ಉಳಿಯುತ್ತದೆ ಎಂದರು.
ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳಾದ ಡಾ. ಆನಂದ .ಕೆ. ಅವರು ಕ್ರಮವಾಗಿ ಜಿಲ್ಲೆಗೆ ಸ್ಥಾನ ಪಡೆದ ಈ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ, ಸ್ಮರಣಿಕೆ ಹಾಗೂ ಪುಷ್ಪಗುಚ್ಛ ನೀಡಿ ಗೌರವಿಸಿ ಅಭಿನಂದಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಕೆ. ಹೊಸಮನಿ ಮಾತನಾಡಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು, ಈ ಸಾಧಕ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಆರ್ಥಿಕ ಸಹಾಯ ಒದಗಿಸಿ, ಈ ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದ್ದಾರೆ ಎಂದು ಅವರು ಹೇಳಿದರು.
ಸನ್ಮಾನ ಸ್ವೀಕರಿಸಿದ ವಿದ್ಯಾರ್ಥಿಗಳು ತಮ್ಮ ಯಶಸ್ಸಿಗೆ ಕಾರಣರಾದ ಪೋಷಕರು, ಶಿಕ್ಷಕರು ಹಾಗೂ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾ ರಿಷಿ ಆನಂದ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಕೆ.ಹೊಸಮನಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು, ಕಾಲೇಜುಗಳ ಪ್ರಾಂಶುಪಾಲರು, ಶಿಕ್ಷಕರು, ಪೋಷಕರು ಮತ್ತು ಗಣ್ಯರು ಉಪಸ್ಥಿತರಿದ್ದರು.

ಪ್ರತಿಭಾವಂತ ಸಾಧಕ ವಿದ್ಯಾರ್ಥಿಗಳಿಗೆ ಡಿಸಿ ಶ್ಲಾಘನೆ

ವಾಣಿಜ್ಯ ವಿಭಾಗದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸೇಂಟ್ ಜೋಸೆಫ್ ಪಿಯು ಕಾಲೇಜ್ ನ ಪ್ರಜ್ಞಾ ಗಲಗಲಿ, ದ್ವಿತೀಯ ಸ್ಥಾನ ಪಡೆದ ವಿ.ಬಿ ದರಬಾರ ಪಿಯು ಕಾಲೇಜಿನ ಸರ್ವಜ್ಞ ಗುರ್ಜಾಲ ಹಾಗೂ ತೃತೀಯ ಸ್ಥಾನ ಪಡೆದ ಶ್ರೀ ಬಿ.ಎಂ.ಪಾಟೀಲ ಕಾಲೇಜಿನ ಕನಿಶಾ ಕಮಲೇಶ ಪೋರವಾಲ, ವಿಜ್ಞಾನ ವಿಭಾಗದಲ್ಲಿ ಕ್ರಮವಾಗಿ ಪ್ರಥಮ ಸ್ಥಾನ ಪಡೆದ ನಗರದ ರೇಡಿಯಂಟ್ ಪಿಯು ಕಾಲೇಜಿನ ನುಝಾತ ಫಾತಿಮಾ ತಾಳಿಕೋಟಿ, ದ್ವಿತೀಯ ಸ್ಥಾನ ಪಡೆದ ಆಕ್ಸಫರ್ಡ್ ಪಿಯು ಕಾಲೇಜಿನ ಲಕ್ಷ್ಮಿ ಪರಸಪ್ಪ ಅಡಿಗಿಮನಿ, ಹಾಗೂ ತೃತೀಯ ಸ್ಥಾನ ಪಡೆದ ಶಾಂತಿನಿಕೇತನ ಪಿಯು ಕಾಲೇಜಿನ ವಿದ್ಯಾಶ್ರೀ ಪ್ರಕಾಶ ಕಾಮನಕೇರಿ, ಆಕ್ಸಫರ್ಡ್ ಪಿಯು ಕಾಲೇಜಿನ ಭಾಗ್ಯ ಪುಂಡಲಿಕಪ್ಪ ಹೊಸಮನಿ, ಇದೇ ಕಾಲೇಜಿನ ನಂದಿತಾ, ಶಾಂತಿನಿಕೇತನ ಪಿಯು ಕಾಲೇಜಿನ ಪೂಜಾ ಈಟಿ, ತುಂಗಳ ಸೈನ್ಸ್ ಪಿಯು ಕಾಲೇಜಿನ ಪೃಥ್ವಿ ಪತ್ತಾರ, ಸೇಂಟ್ ಜೋಸೆಫ್ ಪಿಯು ಕಾಲೇಜಿನ ಸಿದ್ದಿ ಜಿ ತೋನ್ಸಿವಾಲ್ ಹಾಗೂ ತುಂಗಳ ಸೈನ್ಸ್ ಪಿಯು ಕಾಲೇಜಿನ ಸುಶ್ಮಿತಾ ಈರಪ್ಪ ಕೊಪ್ಪಳ ನಿದರ್ಶನವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಶ್ಲಾಘಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಗ್ಗೆ-ಮಳಲಿ ಮಧ್ಯೆ ತಲೆಯೆತ್ತುತ್ತಿದ್ದ ಕಟ್ಟಡ ಕಾಮಗಾರಿ ಸ್ಥಗಿತ

ಮಿರಗಿ ಗೋಳಸಾರ ಗ್ರಾಮದ ಹಳ್ಳಕ್ಕೆ ನೀರು ಹರಿಸಲು ಪ್ರತಿಭಟನೆ

ಇಂಡಿ ಉಪನೋಂದಣಾಧಿಕಾರಿಗಳ ವರ್ತನೆಗೆ ಸಾರ್ವಜನಿಕರ ಬೇಸರ

ಗೊಬ್ಬರ ಅಂಗಡಿಗಳಿಗೆ ಕೃಷಿ ಅಧಿಕಾರಿಗಳ ಭೇಟಿ-ಪರಿಶೀಲನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಗ್ಗೆ-ಮಳಲಿ ಮಧ್ಯೆ ತಲೆಯೆತ್ತುತ್ತಿದ್ದ ಕಟ್ಟಡ ಕಾಮಗಾರಿ ಸ್ಥಗಿತ
    In (ರಾಜ್ಯ ) ಜಿಲ್ಲೆ
  • ಮಿರಗಿ ಗೋಳಸಾರ ಗ್ರಾಮದ ಹಳ್ಳಕ್ಕೆ ನೀರು ಹರಿಸಲು ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಇಂಡಿ ಉಪನೋಂದಣಾಧಿಕಾರಿಗಳ ವರ್ತನೆಗೆ ಸಾರ್ವಜನಿಕರ ಬೇಸರ
    In (ರಾಜ್ಯ ) ಜಿಲ್ಲೆ
  • ಗೊಬ್ಬರ ಅಂಗಡಿಗಳಿಗೆ ಕೃಷಿ ಅಧಿಕಾರಿಗಳ ಭೇಟಿ-ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಇಂಡಿಯ ಕೃಷ್ಣಾ ಮುಖ್ಯ ಕಾಲುವೆಗೆ ಒಂದು ಟಿಎಂಸಿ ನೀರು
    In (ರಾಜ್ಯ ) ಜಿಲ್ಲೆ
  • ಕೂಲಿಕಾರನ ಮಗಳು ಸರಸ್ವತಿ ನಿಡೋಣಿ ತಾಲೂಕಿಗೆ ಪ್ರಥಮ
    In (ರಾಜ್ಯ ) ಜಿಲ್ಲೆ
  • ಸಾಯಿ ಶಾಲೆಯಲ್ಲಿ ಗಮನ ಸೆಳೆಯುತ್ತಿರುವ ಎಐ ಟೀಚರ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 17, 2026
    In ದಿನಪತ್ರಿಕೆ
  • ಮಾನವೀಯತೆ ಸಂದೇಶ ವೇದಿಕೆ ವತಿಯಿಂದ ಊಟ ವಿತರಣೆ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಸಂದೇಶ ವೇದಿಕೆಯಿಂದ ಕುಡಿವ ನೀರಿನ ಅರವಟಿಗೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.