ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲ್ಲೂಕಿನ ಹಂಚಲಿ ಗ್ರಾಮದ ನಿವೃತ್ತ ಶಿಕ್ಷಕ ಸಂಗಪ್ಪ ಶರಣಪ್ಪ ಸೊನ್ನದ (84) ಅವರು ಬುಧವಾರ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಪತ್ರಕರ್ತ ಚಂದ್ರಕಾಂತ ಸೊನ್ನದ ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.
ಅಂತ್ಯಕ್ರಿಯೆ ಗುರುವಾರ ಬೆಳಿಗ್ಗೆ 11ಕ್ಕೆ ಹಂಚಲಿ ಗ್ರಾಮದ ಸ್ವಂತ ಹೊಲದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

