Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮ ಸಮಾಜದ ಹರಿಕಾರ ಬಸವಣ್ಣ

ಈ ತಂಪಿನ ಅಂಗಳದಲಿ ನನ್ನ ನಿನ್ನ ನಡುವೆಯಲಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 18, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ. ೨೩ ರಿಂದ ಜಾನುವಾರುಗಳ ಕಾಲು ಬಾಯಿ ಜ್ವರಕ್ಕೆ ಉಚಿತ ಲಸಿಕಾ ಅಭಿಯಾನ
(ರಾಜ್ಯ ) ಜಿಲ್ಲೆ

ಏ. ೨೩ ರಿಂದ ಜಾನುವಾರುಗಳ ಕಾಲು ಬಾಯಿ ಜ್ವರಕ್ಕೆ ಉಚಿತ ಲಸಿಕಾ ಅಭಿಯಾನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾ ನಿರ್ವಹಣಾ ಸಮಿತಿ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇದೇ ಏ.೨೩ ರಿಂದ ಮೇ.೨೨ ರವರೆಗೆ ಜಿಲ್ಲೆಯಲ್ಲಿ ೯ನೇ ಸುತ್ತಿನ ಕಾಲು ಬಾಯಿ ರೋಗದ ಉಚಿತ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ತಿಳಿಸಿದ್ದಾರೆ.
ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ೨೦೨೫-೨೬ನೇ ಸಾಲಿನ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮ ಯೋಜನೆಯಡಿ ೯ನೇ ಸುತ್ತಿನ ಕಾಲುಬಾಯಿ ಜ್ವರ ರೋಗದ ಲಸಿಕಾ ಕಾರ್ಯಕ್ರಮದ ಜಿಲ್ಲಾ ನಿರ್ವಹಣಾ ಸಮಿತಿ ಸಭೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಅಭಿಯಾನದಲ್ಲಿ ರೈತರು, ಹಾಲು ಉತ್ಪಾದಕರ ಸಂಘಗಳು ಭಾಗವಹಿಸಿ ತಮ್ಮ ಜಾನುವಾರುಗಳಿಗೆ ಕಾಲು ಬಾಯಿ ರೋಗದ ಲಸಿಕೆ ಹಾಕಿಸುವುದರ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಜಾನುವಾರುಗಳಿಗೆ ಆರೋಗ್ಯ ಸಮಸ್ಯೆ ಉಂಟಾದಲ್ಲಿ ೧೯೬೨ ಪಶು ಸಹಾಯವಾಣಿಗೆ ಕರೆ ಮಾಡಿ ಉಚಿತ ಅಂಬ್ಯುಲೆನ್ಸ್ ಸೇವೆ ಪಡೆದುಕೊಳ್ಳಬಹುದಾಗಿದೆ. ಕಾಲು ಬಾಯಿ ರೋಗವು ಎತ್ತು, ಹೋರಿ, ಹಸು ಹಾಗೂ ಎಮ್ಮೆ ಉಂಟಾದರೆ ಆರ್ಥಿಕ ನಷ್ಟ ಉಂಟಾಗುತ್ತದೆ. ಅಲ್ಲದೆ ರೋಗದಿಂದ ಗುಣಮುಖವಾದ ಜಾನುವಾರುಗಳಿಗೆ ಗರ್ಭಕಟ್ಟುವಿಕೆಯಲ್ಲಿ ವಿಳಂಬ ಉಂಟಾಗುತ್ತದೆ. ಜೊತೆಗೆ ಹಾಲಿನ ಇಳುವರಿ ಕಡಿಮೆಯಾಗುವ ಸಾಧ್ಯತೆಯಿದೆ. ೩ ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವುದು ಅಗತ್ಯವಿದೆ ಎಂದು ಹೇಳಿದರು
ಈ ಕಾಲು ಬಾಯಿ ಲಸಿಕೆಯನ್ನು ವರ್ಷಕ್ಕೆ ೨ ಬಾರಿ ಹಾಕಲಾಗುತ್ತದೆ. ಒಂದು ತಿಂಗಳು ನಡೆಯುವ ಈ ಅಭಿಯಾನದಲ್ಲಿ ಲಸಿಕೆದಾರರು ಬೆಳಗ್ಗೆ ೭ ಗಂಟೆಯಿಂದ ೧೦ ಗಂಟೆವರೆಗೆ ಲಸಿಕೆದಾರರಿಗೆ ಲಸಿಕೆ ಹಾಕುವರು. ಈ ಬಾರಿ ಭಾರತ ಪಶುಧನ್ ಆ್ಯಪ್‌ನಲ್ಲಿ ಲಸಿಕೆದಾರರು ಲಸಿಕೆ ಹಾಕಿದ ಮಾಹಿತಿಯನ್ನು ಅಪ್‌ಲೋಡ್ ಮಾಡಲು ಅವಕಾಶ ಇರುತ್ತದೆ. ಈ ಅಭಿಯಾನದಲ್ಲಿ ದಿನಕ್ಕೆ ೭೦೦೦ ಜಾನುವಾರುಗಳಿಗೆ ಹಾಕುವ ಗುರಿ ಹೊಂದಿದ್ದು, ಕಳೆದ ಬಾರಿ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮದಲ್ಲಿ ಶೇ೧೦೦ ರಷ್ಟು ಗುರಿ ಸಾಧನೆ ಮಾಡಲಾಗಿದೆ. ಅಲ್ಲದೆ ೧೯೬೨ರ ಪಶು ಅಂಬ್ಯುಲೆನ್ಸ್ ಕಾರ್ಯನಿರ್ವಹಿಸುತ್ತಿದೆ ಎಂದರು.
ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕರಾದ ಡಾ. ರೇವಣಸಿದ್ದಪ್ಪ ಪದರಾ ಮಾತನಾಡಿ, ಜಿಲ್ಲೆಯಲ್ಲಿ ೧೩೨೮೪೩ ದನಗಳು, ೧೩೫೭೭೩ ಎಮ್ಮೆಗಳು ಒಟ್ಟು ೨೬೮೬೧೩ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ. ಜಿಲ್ಲೆಯಲ್ಲಿ ಕಾಲು ಬಾಯಿ ಜ್ವರಕ್ಕೆ ಲಸಿಕೆ ನೀಡುವ ತಂಡಗಳನ್ನು ರಚಿಸಲಾಗಿದೆಯಂದು ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಹಾಗೂ ರೈತಾಪಿ ವರ್ಗದವರು ಮೊಬೈಲ್ ಸಂಖ್ಯೆ ೮೨೭೭೧೦೦೨೦೦ ಸಂಪರ್ಕಿಸಬಹುದೆAದು ತಿಳಿಸಿದರು. ಈ ಸಂದರ್ಭದಲ್ಲಿ ೯ನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮದ ಕರ ಪತ್ರ, ಭಿತ್ತಿ ಪತ್ರ ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕರು ಮತ್ತು ಮುಖ್ಯ ಪಶುವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮ ಸಮಾಜದ ಹರಿಕಾರ ಬಸವಣ್ಣ

ಈ ತಂಪಿನ ಅಂಗಳದಲಿ ನನ್ನ ನಿನ್ನ ನಡುವೆಯಲಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮ ಸಮಾಜದ ಹರಿಕಾರ ಬಸವಣ್ಣ
    In ವಿಶೇಷ ಲೇಖನ
  • ಈ ತಂಪಿನ ಅಂಗಳದಲಿ ನನ್ನ ನಿನ್ನ ನಡುವೆಯಲಿ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 18, 2026
    In ದಿನಪತ್ರಿಕೆ
  • ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ!
    In (ರಾಜ್ಯ ) ಜಿಲ್ಲೆ
  • ಪ್ರೀತಿ-ಬಾಂಧವ್ಯದಿಂದ ಜೀವನ ಮಾಡಲು ಧಾರ್ಮಿಕ ಕಾರ್ಯಕ್ರಮಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್‌ ಸಾಧನೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ತತ್ವದಾರ್ಶ ಮೈಗೂಡಿಸಿಕೊಳ್ಳಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಜನಗಣತಿ ಮೊದಲ ಹಂತಕ್ಕೆ ಚಾಲನೆ: ೧೮೨ ಸಿಬ್ಬಂದಿ ನಿಯೋಜನೆ
    In (ರಾಜ್ಯ ) ಜಿಲ್ಲೆ
  • ಏ.೨೦ ರಂದು ಬಸವ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಪೂರ್ವಭಾವಿ ಸಭೆ ಇಂದು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.