ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಇ.ಡಿ ಸೆಲ್(ED Cell)ವತಿಯಿಂದ, ಆಯುರ್ವೇದ ವೈದ್ಯಕೀಯ ಪದ್ಧತಿಯ ತತ್ವಗಳನ್ನು ನವೀಕರಿಸುವ ಹೊಸ ತರ್ಕ ಮಂಡನೆಯ ಕುರಿತು ವಿದ್ಯಾರ್ಥೀಗಳಿಗೆ ಆಯುರ್ಥಿಂಕ್ ಫೆಸ್ಟ-2026 ವಿಷಯ ಕುರಿತು ತರ್ಕ ಸಂಗ್ರಹಣೆ ಕಾರ್ಯಕ್ರಮ ಶನಿವಾರ ನಡೆಯಿತು.
ಈ ಕಾರ್ಯಕ್ರಮವನ್ನು ಉದ್ಘಾಟಸಿದ ಕೆ.ಎಲ್.ಇ ಸಂಸ್ಥೆಯ ನಿರ್ದೇಶಕ ಡಾ.ಬಿ.ಶ್ರೀನಿವಾಸ ಪ್ರಸಾದ, ಇಂದಿನ ದಿನಗಳಲ್ಲಿ ಆಯುರ್ವೇದ ಪದ್ಧತಿಯನ್ನು ವೈಜ್ಞಾನಿಕರಣ ಮಾಡುವುದು ಮುಖ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಂಶೋಧನ ಕೇಂದ್ರದ ಸಿಬ್ಬಂದಿ ಸಂಯೋಜಕ ಡಾ.ನಿರ್ಮಲಾ, ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ವೈದ್ಯರಾದ ಡಾ.ವಿಜಯಲಕ್ಷ್ಮಿ ಪೂಜಾರಿ, ಡಾ. ಕಾಶೀನಾಥ ಹದಿಮೂರ ಮುಂತಾದವರು ಉಪಸ್ಥಿತರಿದ್ದರು.
ಆಯುರ್ವೇದ, ಎಂಜನಿಯರಿಂಗ್ ಹಾಗೂ ಬೇರೆ ಬೇರೆ ಕಾಲೇಜುಗಳಿಂದ ಸುಮಾರು 80 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

