ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಿವೃತ್ತ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ.ಚವ್ಹಾಣ (74) ಗುರುವಾರ ರಾತ್ರಿ ನಿಧನರಾಗಿದ್ದಾರೆ.
ವಿಜಯಪುರ ನಗರದ ಚಾಲುಕ್ಯ ನಗರದ ನಿವಾಸಿಯಾಗಿದ್ದ ಅವರು, ಪಿ.ಎಸ್.ಐ, ಸಿಪಿಐ, ಡಿವೈಎಸ್ಪಿ ಸೇರಿದಂತೆ ಹೆಚ್ಚುವರಿ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು. ಬೆಂಗಳೂರು, ಹುಬ್ಬಳ್ಳಿ, ರೋಣ, ಅಥಣಿ, ಹೊಸಪೇಟೆ, ಬಾದಾಮಿ, ವಿಜಯಪುರ ನಗರ, ಗದಗ, ಮೈಸೂರು, ಹಾಸನ ಹಾಗೂ ದಾವಣಗೆರೆಯಲ್ಲಿ ಸೇವೆ ಸಲ್ಲಿಸಿದ್ದ ಅವರು, ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು- ಬಳಗವನ್ನು ಅಗಲಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ಅಲೋಕಕುಮಾರ ಸೇರಿದಂತೆ ನಾನಾ ಗಣ್ಯರು ಮೃತರ ಅಂತಿಮ ದರ್ಶನ ಪಡೆದು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಮೃತರ ಅಂತ್ಯಕ್ರಿಯೆ ಶುಕ್ರವಾರ ಸಂಜೆ ಚಡಚಣ ತಾಲೂಕಿನ ಬರಡೋಲ ಗ್ರಾಮದ ಅವರ ತೋಟದಲ್ಲಿ ನಡೆಯಿತು.

