Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ

ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ

ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಾಗಲಕೋಟೆ ಜಿಲ್ಲೆಗೆ ಪ್ರಥಮ ಸ್ಥಾನ ತಂದ ನೇಹಾ ಕಂಕಣವಾಡಿ
(ರಾಜ್ಯ ) ಜಿಲ್ಲೆ

ಬಾಗಲಕೋಟೆ ಜಿಲ್ಲೆಗೆ ಪ್ರಥಮ ಸ್ಥಾನ ತಂದ ನೇಹಾ ಕಂಕಣವಾಡಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಪ್ರಸಕ್ತ 2026ನೇ ಸಾಲಿನ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷೆಯ ಫಲಿತಾಂಶ ಏಪ್ರಿಲ್ 15ರಂದು ಪ್ರಕಟಗೊಂಡಿದ್ದು, ಬಸವೇಶ್ವರ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನ ಪ್ರತಿಭಾವಂತ ವಿದ್ಯಾರ್ಥಿನಿ ನೇಹಾ ಕಂಕಣವಾಡಿ ಅವರು ಶೇ.98.40 ಅಂಕಗಳನ್ನು ಗಳಿಸುವ ಮೂಲಕ ಬಾಗಲಕೋಟೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ನೇಹಾ ಅವರು ಒಟ್ಟು 500 ಅಂಕಗಳಲ್ಲಿ 492 ಅಂಕಗಳನ್ನು ಗಳಿಸಿದ್ದು, ಅವರ ವಿಷಯವಾರು ಸಾಧನೆ ಗಮನಾರ್ಹವಾಗಿದೆ. ಇಂಗ್ಲೀಷ್ ವಿಷಯದಲ್ಲಿ 96, ಕನ್ನಡದಲ್ಲಿ 99, ಗಣಿತದಲ್ಲಿ 97, ವಿಜ್ಞಾನದಲ್ಲಿ 99 ಹಾಗೂ ಸಮಾಜ ವಿಜ್ಞಾನದಲ್ಲಿ 97 ಅಂಕಗಳನ್ನು ಪಡೆದು ಸಮಗ್ರವಾಗಿ ಶೇ.98.40 ಸಾಧನೆ ಮಾಡಿದ್ದಾರೆ. ಈ ಮೂಲಕ ಅವರು ಶಾಲೆಯಷ್ಟೇ ಅಲ್ಲದೆ ಜಿಲ್ಲೆಯ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಸಾಧನೆಯ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ. ಮನ್ನಿಕೇರಿ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಶಿಕ್ಷಣ ವಲಯದ ಗಣ್ಯರು ಅಭಿನಂದನೆ ಸಲ್ಲಿಸಿ, ಮುಂದಿನ ಶಿಕ್ಷಣ ಜೀವನದಲ್ಲಿ ಇನ್ನಷ್ಟು ಎತ್ತರಕ್ಕೆ ತಲುಪಲಿ ಎಂದು ಶುಭಾಶಯ ಕೋರಿದ್ದಾರೆ.
ಶಾಲೆಯ ಪ್ರಾಚಾರ್ಯರು ಹಾಗೂ ಶಿಕ್ಷಕ ವೃಂದವೂ ನೇಹಾ ಅವರ ಪರಿಶ್ರಮ, ನಿಯಮಿತ ಅಧ್ಯಯನ ಹಾಗೂ ಶಿಸ್ತುಬದ್ಧ ಜೀವನ ಶೈಲಿಯೇ ಈ ಸಾಧನೆಗೆ ಕಾರಣವೆಂದು ಪ್ರಶಂಸಿಸಿದ್ದಾರೆ. ವಿದ್ಯಾರ್ಥಿಗಳಿಗೆ ಪ್ರೇರಣೆ ಯಾಗುವಂತಹ ಈ ಸಾಧನೆ ಶಾಲೆಯ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಾಧನೆ ಇತರೆ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದ್ದು, ಕಠಿಣ ಪರಿಶ್ರಮ ಮತ್ತು ದೃಢ ಸಂಕಲ್ಪ ಇದ್ದರೆ ಯಾವ ಗುರಿಯನ್ನಾದರೂ ಸಾಧಿಸಬಹುದು ಎಂಬುದಕ್ಕೆ ಉತ್ತಮ ಉದಾಹರಣೆಯಾಗಿದೆ.

ಮಗಳ ಸಾಧನೆಗೆ ತಂದೆ ಹರ್ಷ

ಮಗಳ ಈ ಸಾಧನೆಗೆ ತಂದೆ ಹಾಗೂ ಬಾಗಲಕೋಟೆ ಜಿಲ್ಲೆಯ ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಶೈಲ ಕಂಕಣವಾಡಿ ಅವರು ಅಪಾರ ಸಂತೋಷ ವ್ಯಕ್ತಪಡಿಸಿ, ನೇಹಾ ಅವರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಕುಟುಂಬದ ಬೆಂಬಲದಿಂದ ಈ ಯಶಸ್ಸು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ

ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ

ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ

ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ :ಹರ್ಷಾನಂದ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ
    In (ರಾಜ್ಯ ) ಜಿಲ್ಲೆ
  • ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ :ಹರ್ಷಾನಂದ ಶ್ರೀ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಪತ್ರಕರ್ತ ಫಿರೋಜ್
    In (ರಾಜ್ಯ ) ಜಿಲ್ಲೆ
  • ಸ್ವಚ್ಚತಾ ಕಾರ್ಯದೊಂದಿಗೆ ಸಸಿ ನೆಟ್ಟು ಪರಿಸರ ರಕ್ಷಣೆಗೆ ಮುಂದಾಗಿ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಮನೆಗೊಂದು ಮರ ಬೆಳೆಸಬೇಕು :ರಮೇಶ
    In (ರಾಜ್ಯ ) ಜಿಲ್ಲೆ
  • ಹಸಿರೀಕರಣಕ್ಕೆ ಕೆಬಿಜೆಎನ್‌ಎಲ್ ಕೊಡುಗೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ :ಪ್ರಾಚಾರ್ಯ ಸಜ್ಜನ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆಗಾಗಿ ಪಣ ತೊಡೋಣ :ನ್ಯಾ.ಕಾಂಬಳೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.