ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಬಸವ ಜಯಂತಿ ಆಚರಣೆಯನ್ನು ಏ.೨೦ರಂದು ಸಂಜೆ ೫ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ನಗರದ ಬಸವೇಶ್ವರ ವೃತ್ತದಲ್ಲಿರುವ ವಿಶ್ವಗುರು ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ
ಅಂದು ಸಂಜೆ ೪ಗಂಟೆಗೆ ಭಾವಚಿತ್ರದ ಮೆರವಣಿಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ಪ್ರಮುಖ ವೃತ್ತಗಳ ಮೂಲಕ ಸಾಗಿ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರವರೆಗೆ ಜರುಗಲಿದೆ.
ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ–೨ ಹಾಗೂ ಶಾಸಕರಾದ ಪ್ರಕಾಶ ಬಿ. ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್. ನಾಡಗೌಡ, ಸಂಸದರಾದ ರಮೇಶ ಜಗಜಿಣಗಿ ಹಾಗೂ ಸುಧಾ ಮೂರ್ತಿ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಬಿ.ಎಸ್.ಕವಲಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್. ಪೂಜಾರ, ಕೇಶವ ಪ್ರಸಾದ ಎಸ್, ಮಹಾನಗರ ಪಾಲಿಕೆಯ ಮಹಾಪೌರರಾದ ಮಡಿವಾಳಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಗಂಗಾಧರ ಎಸ್ ಸಂಬಣ್ಣಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ ಅವರು ಭಾಗವಹಿಸಲಿದ್ದಾರೆ.
ಪ್ರೊ. ಎಚ್. ಟಿ.ಪೋತೆ ವಿಶೇಷ ಉಪನ್ಯಾಸ ನೀಡಲಿದ್ದು, ಶ್ರೀಮತಿ ಶ್ರೀದೇವಿ ಭಂಡಾರಿಕರ ಸುಗಮ ಸಂಗೀತ ನಡೆಸಿಕೊಡಲಿದ್ದಾರೆ.
ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಅಧಿಕಾರಿ, ಸಿಬ್ಬಂದಿ ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಗಣ್ಯರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.
