Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ!
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ | ಶಾಸಕ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ | ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು

ಬೆಂಗಳೂರು: ಧಾರವಾಡ ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಾಧಿ ಶಿಕ್ಷೆ ನೀಡಿದೆ. ಇದೇ ಪ್ರಕರಣದಲ್ಲಿ 15 ಅಪರಾಧಿಗಳಿಗೂ ಜೀವಾವಾಧಿ ಶಿಕ್ಷೆ ವಿಧಿಸಿರುವ ಕೋರ್ಟ್ 19ನೇ ಅಪರಾಧಿ ಚೆನ್ನಕೇಶವ ಟಿಂಗರಿಕರ್ ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ಕೋರ್ಟ್ ನ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಇಂದು ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. ವಿನಯ್ ಕುಲಕರ್ಣಿ ಮತ್ತು ಇತರರಿಗೆ ಕ್ರಿಮಿನಲ್ ಪಿತೂರಿ ಮತ್ತು ಕೊಲೆ ಸೇರಿದಂತೆ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ವಿಧಿಸಿದ್ದಾರೆ. ಇದೇ ವೇಳೆ ಯೋಗೇಶ್ ಗೌಡ ಮಕ್ಕಳಿಗೆ ಪರಿಹಾರವಾಗಿ 16 ಲಕ್ಷ ರೂಪಾಯಿ ನೀಡುವಂತೆ ಕೋರ್ಟ್ ಸೂಚಿಸಿದೆ.
ವಿನಯ್ ಕುಲಕರ್ಣಿ ಕಳೆದ 3 ದಿನದಿಂದ ಒಂದೇ ಬಟ್ಟೆಯಲ್ಲಿದ್ದಾರೆ. ಬಟ್ಟೆ ಬದಲಿಸಲು ಅನುಮತಿ ನೀಡುವಂತೆ ಶಾಸಕರ ಪರ ವಕೀಲ ಸುನಿಲ್ ಮನವಿ ಮಾಡಿದ್ದರು. ಅಪರಾಧಿಗಳಿಗೆ ಬಟ್ಟೆ ಒದಗಿಸಲು ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೈಲು ಕೈಪಿಡಿಯಲ್ಲಿರುವಂತೆ ಬಟ್ಟೆ ಒದಗಿಸಲು ಜಡ್ಜ್‌ ಸೂಚನೆ ನೀಡಿದ್ದಾರೆ. ಇದರ ಜತೆಗೆ ಪ್ರತಿ ಸೆಕ್ಷನ್‌ಗೂ ಪ್ರತ್ಯೇಕವಾಗಿ ದಂಡ ವಿಧಿಸಲಾಗಿದೆ.
2016ರ ಜೂನ್ 15ರಂದು ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು ಸಪ್ತಾಪುರ ಬಡಾವಣೆಯ ಜಿಮ್​​ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡದ ಉಪನಗರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆಯನ್ನು ನಡೆಸಿದ್ದರು. ಆಸ್ತಿ ವಿವಾದದ ವಿಚಾರಕ್ಕಾಗಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಆರು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ, ಹತ್ಯೆಯಾದ ಯೋಗೇಶ್‌ ಗೌಡ ಕುಟುಂಬದ ಸದಸ್ಯರ ಒತ್ತಾಯದ ಮೇರೆಗೆ 2019ರಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಬಳಿಕ ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂದು ಹೇಳಿತ್ತು. ಅಲ್ಲಿಂದ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿತ್ತು.
ಈ ಕೊಲೆಯಲ್ಲಿ ಶಾಸಕ ವಿನಯ್‌ ಕುಲಕರ್ಣಿ ಕೈವಾಡವಿರುವ ಅನುಮಾನ ವ್ಯಕ್ತವಾಗಿತ್ತು. 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು, ವಿನಯ್‌ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ಇದರ ನಂತರ ವಿನಯ್‌ ಕುಲಕರ್ಣಿ ಜಾಮೀನು ಪಡೆದು ಹೊರಗೆ ಬಂದಿದ್ದರು. ನಂತರದಲ್ಲಿ ಈ ಪ್ರಕರಣವನ್ನು ಜನಪ್ರತಿನಿಧಿ ಕೋರ್ಟ್​​ಗೆ ನೀಡಲಾಗಿತ್ತು. ಇದೀಗ ಈ ಅವರಿಗೆ ಶಿಕ್ಷೆಯನ್ನು ಘೋಷಣೆ ಮಾಡಿದೆ.

BIJAPUR NEWS bjp congress patil public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
    In (ರಾಜ್ಯ ) ಜಿಲ್ಲೆ
  • ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.