ಸಿಂದಗಿ: ನಮ್ಮ ಮಣ್ಣು ಅಮೃತಕ್ಕೆ ಸಮನಾಗಿದ್ದು ಅದನ್ನು ಉಳಿಸಿ ಬೆಳೆಸುವ ಕಾರ್ಯ ನಮ್ಮದು ಎಂದು ತಾಪಂ ಇಒ ರಾಮು ಅಗ್ನಿ ಹೇಳಿದರು.
ತಾಲೂಕು ಪಂಚಾಯತ್ ಆವರಣದಿಂದ ಪಟ್ಟಣದ ವಿವಿಧ ಪ್ರಮುಖ ರಸ್ತೆಗಳಲ್ಲಿ ಹಮ್ಮಿಕೊಂಡ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಅವರು, ದೇಶದ ಮೂಲೆ ಮೂಲೆಯಿಂದ ಮಣ್ಣನ್ನು ಶೇಖರಣೆ ಮಾಡಿ ವಿವಿಧ ರೀತಿಯ ಸಸ್ಯಗಳನ್ನು ಬೆಳೆಸುವ ಉದ್ದೇಶ ಹೊಂದಿದ ಕಾರ್ಯಕ್ರಮವಾಗಿದೆ. ನಮ್ಮ ಮಣ್ಣು ದೆಹಲಿ ತಲುಪಲಿದ್ದು, ಅಲ್ಲಿಯೂ ಕೂಡ ದೊಡ್ಡ ಮಟ್ಟದ ಕಾರ್ಯಕ್ರಮ ನಡೆಯಲಿದ್ದು ಅದರಲ್ಲಿ ನಮ್ಮ ಅಮೃತ ಕಳಶ ಇರುತ್ತದೆ ಎಂದರು.
ಈ ವೇಳೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಂಭುಲಿಂಗ ಹಿರೇಮಠ, ನಿತ್ಯಾನಂದ ಯಲಗೋಡ, ಸಿದ್ದು ಅಂಕಲಗಿ, ಎ.ಎ ದುರ್ಗದ, ವಿ.ಎ ನಾಡಗೌಡ ಎ.ಹಚ್ ಯಾಳಗಿ, ಐಇಸಿ ಸಂಯೋಜಕ ಭೀಮರಾಯ ಚೌಧರಿ ಸೇರಿದಂತೆ ತಾಪಂ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪ್ರೇರಣಾ ಪಬ್ಲಿಕ್ ಶಾಲೆಯ ಮಕ್ಕಳು ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.
Related Posts
Add A Comment