Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದ.ಭಾರತದಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪನೆ ಅಗತ್ಯ
(ರಾಜ್ಯ ) ಜಿಲ್ಲೆ

ದ.ಭಾರತದಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪನೆ ಅಗತ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಂಗಳೂರಿನಲ್ಲಿ ನಡೆದ ನ್ಯಾಯಾಂಗ ಅಧಿಕಾರಿಗಳ 22ನೇ ದ್ವೈವಾರ್ಷಿಕ ರಾಜಮಟ್ಟದ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಅಭಿಮತ

ಬೆಂಗಳೂರು: ರಾಜ್ಯದ ಉಚ್ಚ ನ್ಯಾಯಾಲಯಕ್ಕೆ ಪ್ರವೇಶವನ್ನು ಸುಧಾರಿಸಬೇಕೆನ್ನುವ ಬಲವಾದ ಅಗತ್ಯವಿದೆ. ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಜಿಕೆವಿಕೆಯ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಭಾಂಗಣದಲ್ಲಿ ನಡೆದ ನ್ಯಾಯಾಂಗ ಅಧಿಕಾರಿಗಳ 22ನೇ ದ್ವೈವಾರ್ಷಿಕ ರಾಜಮಟ್ಟದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪ್ರಸಕ್ತ ಕಾಲಘಟ್ಟದಲ್ಲಿ ಕಾನೂನು ಮತ್ತು ತಂತ್ರಜ್ಞಾನವು ಪ್ರತ್ಯೇಕ ಕ್ಷೇತ್ರಗಳಾಗಿ ಉಳಿದಿಲ್ಲ. ಈಗ ಮುಂದುವರೆದು ನ್ಯಾಯಾಂಗ ಕ್ಷೇತ್ರಕ್ಕೆ ಕೃತಕ ಬುದ್ಧಿಮತ್ತೆಯ ಪ್ರವೇಶವಾಗಿದೆ. ಅದರಿಂದಾಗಿ ಆಡಳಿತ, ಹಕ್ಕುಗಳು ಮತ್ತು ನ್ಯಾಯದ ಸ್ವರೂಪವನ್ನು ರೂಪಿಸುವ ಪರಸ್ಪರ ಸಂಬಂಧ ಹೊಂದಿರುವ ಶಕ್ತಿಗಳ ನಡುವೆ ನಿರ್ಣಾಯಕ ಹಂತದಲ್ಲಿ ನಾವು ಇಂದು ನಿಂತಿದ್ದೇವೆ. ಈ ಪಯಣದಲ್ಲಿ ನ್ಯಾಯಾಂಗಕ್ಕೆ ಅದರ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ಗೌರವಿಸುತ್ತಲೇ ಅದಕ್ಕೆ ಬೆಂಬಲ ನೀಡುವುದು, ಸಕ್ರಿಯಗೊಳಿಸುವುದು ಮತ್ತು ಬಲಪಡಿಸುವುದು ಆಡಳಿತದ ಪಾತ್ರ. ನ್ಯಾಯಾಂಗ ಮೂಲಭೂತ ಸೌಕರ್ಯ, ಡಿಜಿಟಲ್ ಪರಿವರ್ತನೆ, ನಾವೀನ್ಯತೆ ಹಾಗೂ ನ್ಯಾಯದಾನವು ಒಟ್ಟಾಗಿ ಪ್ರಗತಿ ಹೊಂದಲು ಸೂಕ್ತವಾದ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸಲು ಕರ್ನಾಟಕ ಸರ್ಕಾರವು ಬದ್ಧವಾಗಿದೆ ಎಂದರು.
ನ್ಯಾಯದಾನ ವ್ಯವಸ್ಥೆಗೆ ವೇಗ ಮತ್ತು ಪ್ರವೇಶವನ್ನು ಒದಗಿಸಲು ಕರ್ನಾಟಕದಲ್ಲಿ ನಾವು ಖಚಿತ ಸುಧಾರಣೆಗಳನ್ನು ಕೈಗೊಂಡಿದ್ದೇವೆ. ಕಾಲಬದ್ಧ ಪ್ರಕರಣ ನಿರ್ವಹಣೆ, ಸರಹದ್ದುಗಳ ಪುನರ್ ರಚನೆಯ ಮೂಲಕ ಉಚ್ಚ ನ್ಯಾಯಾಲಯಗಳ ಹೊರೆಯನ್ನು ತಗ್ಗಿಸುವುದು ಹಾಗೂ ಸರ್ಕಾರಿ ವ್ಯಾಜ್ಯ ಅಭ್ಯಾಸಗಳನ್ನು ಬಲಪಡಿಸಲಾಗುತ್ತಿದೆ ಎಂದಿದ್ದಾರೆ.
ನಮ್ಮ ಪ್ರಜಾಪ್ರಭುತ್ವದ ಮೂಲಾಧಾರವಾಗಿರುವ ನ್ಯಾಯಾಂಗ ಸ್ವಾತಂತ್ರ್ಯವನ್ನು ಬಾಹ್ಯ ಒತ್ತಡಗಳಿಂದ ಮಾತ್ರವಲ್ಲದೆ ಸೂಕ್ಷ್ಮ ತಾಂತ್ರಿಕ ಅವಲಂಬನೆಯಿಂದಲೂ ಸಂರಕ್ಷಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಸಿಎಂ ನುಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.