Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
(ರಾಜ್ಯ ) ಜಿಲ್ಲೆ

ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಾ.ರಾಜ್ ಜನ್ಮ ದಿನಾಚರಣೆ ಅರ್ಥಪೂರ್ಣಗೊಳಿಸಲು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಶೇಷ ನಟನೆ ಮೂಲಕ ಕನ್ನಡಿಗರ ಮನೆ-ಮಾತಾದ ನಟ ಸಾರ್ವಭೌಮ ಡಾ.ರಾಜಕುಮಾರ್ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ವಿಶಿಷ್ಟವಾಗಿ ಆಚರಿಸಲು ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಕಾರ್ಯಕ್ರಮಕ್ಕೆ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮೇರುನಟ ಡಾ.ರಾಜ್‌ಕುಮಾರ್ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ಏ.೨೪ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಕಂದಗಲ್ ಶ್ರೀ ಹನುತರಾಯ ರಂಗಮಂದಿರದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಡಾ.ಔದ್ರಾಮ ಅವರು ತಿಳಿಸಿದರು.
ಡಾ. ರಾಜ್ ಕುಮಾರ ಅವರು, ಕನ್ನಡದ ಮೇರು ನಟ, ನಟಸಾರ್ವಭೌಮರಾಗಿ ಈ ನಾಡು ಕಂಡ ನೆಚ್ಚಿನ ನಟರಾಗಿದ್ದಾರೆ. ಕನ್ನಡಪರ ಹೋರಾಟಗಳಲ್ಲಿ ಭಾಗಿಯಾಗಿ ನಾಡು-ನುಡಿಗಾಗಿ ಮಹತ್ತರ ಸೇವೆ ಸಲ್ಲಿಸಿದ್ದಾರೆ. ಇವರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದರು. ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ, ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು ಸಲಹೆ ನೀಡಿದಂತೆ ಈ ಕಾರ್ಯಕ್ರಮದಲ್ಲಿ ಡಾ.ರಾಜಕುಮಾರ್ ಅವರ ಚಲನಚಿತ್ರ ಗೀತೆಗಳನ್ನು ಹಾಡಲು ಆಸಕ್ತ ಕಲಾವಿದರು ಮತ್ತು ಎಲ್ಲ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಬೇಕು. ವಯಸ್ಸಿನ ಮಿತಿ ವಿಧಿಸದೇ,ಕಾರ್ಯಕ್ರಮದ ನಿಗದಿತ ಸಮಯ ಮೀರದಂತೆ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರಿಗೂ ಅವಕಾಶ ನೀಡಬೇಕು ಎಂದರು.
ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ, ಮಹಾನಗರ ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣವರ, ಸಹಾಯಕ ತೋಟಗಾರಿಕಾ ನಿರ್ದೇಶಕ ಭಗವಂತ ಜಿಗಜಿಣಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ ಎಂ.ಸಿ ಮುಲ್ಲಾ, ಅಡಿವೆಪ್ಪ ಸಾಲಗಲ್, ಸುರೇಶ ಬಿಜಾಪುರ, ಫಯಾಜ್ ಕಲಾದಗಿ, ಶರಣು ಸಬರದ, ಮಂಜುಳಾ ಅಂಗಡಿ, ಸುರೇಶ್ ಬಬಲೇಶ್ವರ, ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ ಸೇರಿದಂತೆ ವಾರ್ತಾ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಡಾ.ರಾಜ್ ಅಭಿನಯದ ಸಿನಿಮಾ ಗೀತೆಗಳ ಗಾಯನಕ್ಕೆ ಅವಕಾಶ

ವಿಜಯಪುರ: ವರನಟ ಡಾ.ರಾಜಕುಮಾರ್ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಡಾ.ರಾಜಕುಮಾರ್ ಅವರ ಚಲನಚಿತ್ರ ಗೀತೆಗಳ ಪ್ರಸ್ತುತಪಡಿಸಲು ಆಸಕ್ತ ಸಾರ್ವಜನಿಕರಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ.
ವಯಸ್ಸಿನ ಮಿತಿ ಇರುವುದಿಲ್ಲ. ಪ್ರಸ್ತುತಿಯ ಸಮಯದ ಮಿತಿ ಇದೆ. ಒಬ್ಬರಿಗೆ ಒಂದು ಹಾಡಿಗೆ ಮಾತ್ರ ಅವಕಾಶವಿದ್ದು, ಆಯೋಜಕರ ನಿರ್ಣಯವೇ ಅಂತಿಮವಾಗಿದ್ದು, ತಮ್ಮ ಹೆಸರು ಮತ್ತು ಪೂರ್ಣ ವಿಳಾಸದೊಂದಿಗೆ ಇದೇ ಏಪ್ರೀಲ್ ೨೨ರೊಳಗಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ನೋಂದಣಿ ಕಡ್ಡಾಯವಾಗಿದೆ.
ಕಾರ್ಯಕ್ರಮಕ್ಕೆ ಹೆಸರು ನೋಂದಾಯಿಸುವ ಹಾಡುಗಾರರು, ಕಲಾವಿದರು, ಸಾರ್ವಜನಿಕರು ಸ್ವಂತ ಖರ್ಚಿನಲ್ಲೇ ಕಾರ್ಯಕ್ರಮಕ್ಕೆ ಬರತಕ್ಕದ್ದು. ಕಾರ್ಯಕ್ರಮದಲ್ಲಿ ಪ್ರಮಾಣ ಪತ್ರವನ್ನು ಮಾತ್ರ ಗೌರವವಾಗಿ ವಿತರಿಸಲಾಗುವುದು. ಆಸಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯನ್ನು ಅಥವಾ ಮೊಬೈಲ್ ಸಂಖ್ಯೆ ೯೦೪೯೪೯೯೭೮೩ ಸಂಪರ್ಕಿಸಿ ಹೆಸರು ನೋಂದಾಯಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
  • ದ.ಭಾರತದಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪನೆ ಅಗತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.