ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಾವು ಮಾಡಿದ ನಿಷ್ಠೆ, ಪ್ರಾಮಾಣಿಕತೆ, ನಿಸ್ವಾರ್ಥ ಸತ್ಕಾರ್ಯಗಳು ಆಪತ್ಕಾಲದಲ್ಲಿ ನಮ್ಮನ್ನು ಕಾಪಾಡುತ್ತವೆ ಎಂದು ಇಂಗ್ಲೆಂಡಿನ ಎಡಿನ್ಬರ್ಗ್ ವಿಶ್ವವಿದ್ಯಾಲಯದ ವೈದ್ಯೆ ಡಾ. ಗೀತಾ ಶೆಟ್ಟಿ ಹೇಳಿದ್ದಾರೆ.
ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗದ ವತಿಯಿಂದ ಆಯೋಜಿಸಲಾದ ಕ್ಯಾನ್ಸರ್ ನೊಂದಿಗೆ ಹೋರಾಟ ಕುರಿತು ಅವರು ಅತಿಥಿ ಉಪನ್ಯಾಸ ನೀಡಿದ ಅವರು ಭಾರತೀಯ ವೈದ್ಯಕೀಯ ಚಿಕಿತ್ಸೆ ವಿಶ್ವದಲ್ಲೇ ಶ್ರೇಷ್ಠವಾಗಿದೆ ಎಂದು ಅವರು ಹೇಳಿದರು.
ಶಸ್ತ್ರ ಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿ, ಡಾ. ಗೀತಾ ಶೆಟ್ಟಿ ಅವರು ತಾವು ಓದಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, ಹಿಂದೆಯೂ ಮತ್ತು ಮುಂದೆಯೂ ಎಂದೆಂದಿಗೂ ನಮಗೆ ಮಾದರಿಯಾಗಿದ್ದಾರೆ” ಎಂದು ಹೇಳಿದರು.
ಪ್ರಾಧ್ಯಾಪಕಿ ಡಾ.ವಿಜಯಾ.ಪಾಟೀಲ ಮಾತನಾಡಿ, ಡಾ. ಗೀತಾ ಶೆಟ್ಟಿ ಅವರು ಮಾದರಿ ವೈದ್ಯ ಮತ್ತು ಮಾದರಿ ರೋಗಿಯೂ ಆಗಿದ್ದಾರೆ. ಅವರ ಧೈರ್ಯ, ಇಚ್ಛಾಶಕ್ತಿ ಮತ್ತು ಸೇವಾ ಉತ್ಸುಕತೆಗಳು ಮೆಚ್ಚುವಂಥವು ಎಂದರು.
ಬಿ.ಎಲ್.ಡಿ.ಇ ಮೆಡಿಕಲ್ ಕಾಲೇಜಿನ ವೈಜ್ಞಾನಿಕ ಶೈಕ್ಷಣಿಕ ಮತ್ತು ಸಂಶೋಧನೆ ಸಮಿತಿ(SARS) ಹಾಗೂ ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮೆಡಿಕಲ್ ಕಾಲೇಜಿನ ಪ್ರಿನ್ಸಿಪಾಲ್ ಡಾ. ತೇಜಸ್ವಿನಿ ವಲ್ಲಭ, ಹಿರಿಯ ಉಪ ಪ್ರಾಚಾರ್ಯ ಡಾ. ವಿಜಯಕುಮಾರ ಟಿ. ಕಲ್ಯಾಣಪ್ಪಗೋಳ, ವೈದ್ಯಕೀಯ ಅಧೀಕ್ಷಕ ಡಾ. ಸಂಜೀವ ಬೆಂಟೂರ, ಆರ್ ಆ್ಯಂಡ್ ಡಿ ವಿಭಾಗದ ಡೀನ್ ಡಾ. ಎಂ. ಎಂ. ಪಾಟೀಲ, ಎಸ್. ಎ. ಆರ್. ಎಸ್ ಚೇರಮನ್ ಡಾ.ಲತಾದೇವಿ ಎಚ್. ಟಿ, ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ. ರಮಾಕಾಂತ ಬಳೂರಕರ
ಜಿಲ್ಲಾಸ್ಪತ್ರೆಯ ಹಿರಿಯ ಶಸ್ತ್ರ ಚಿಕಿತ್ಸಕ ಡಾ.ಆನಂದ ಝಳಕಿ, ಡಾ. ವಿಜಯ.ಕಟ್ಟಿ, ಡಾ. ಗಿರೀಶ ಕುಲ್ಲೊಳ್ಳಿ, ಡಾ. ವಿಕ್ರಂ ಸಿಂದಗಿಕರ, ಡಾ. ದೀಪಕ ಚವ್ಹಾಣ, ಸ್ನಾತಕ ಹಾಗೂ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

