ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಶ್ವಗುರು ಜಗಜ್ಯೋತಿ ಬಸವಣ್ಣವರ ಜಯಂತಿ ಆಚರಣೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಇತಿಹಾಸ ವಿಭಾಗದ ಸಹಯೋಗದಲ್ಲಿ ವಿಶ್ವಗುರು ಬಸವ ಜಯಂತಿ ಆಚರಿಸಲಾಯಿತು.
ಈ ವೇಳೆಯಲ್ಲಿ ಇತಿಹಾಸ ವಿಭಾಗದ ಮುಖಸ್ಥ ಪ್ರೊ.ಐ.ಎಸ್.ಹೂಗಾರ ಮಾತನಾಡಿ, ೧೨ ನೇ ಶತಮಾನದಲ್ಲಿ ಬಸವಣ್ಣವರು ತಮ್ಮ ವಚನಗಳ ಸಾಹಿತ್ಯದ ಮೂಲಕ ಸಮಾಜವನ್ನು ತಿದ್ದುವ ಕಾರ್ಯ ಮಾಡಿದ್ದಾರೆ. ಅಂದಿನ ಪ್ರಥಮ ಸಂಸತ್ತು ಅನುಭವ ಮಂಟಪವನ್ನು ಸ್ಥಾಪಿಸಿ ಜಾತಿ, ಲಿಂಗ, ಮತ್ತು ಮತ ಭೆೇದವನ್ನು ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಿ ವಿಶ್ವ ಭಾತೃತ್ವ ಸಾರಿದವರು, ಬಸಣ್ಣನವರ ವಿಚಾರಧಾರೆಗಳನ್ನು ನಮ್ಮಲ್ಲಿ ಅಳಡಿಸಿಕೊಳ್ಳಬೇಕು ಎಂದು ಹೆಳಿದರು.
ಈ ವೇಳೆ ಡಾ.ಉಷಾದೇವಿ ಹಿರೇಮಠ ಮಾತನಾಡಿ, ಬಸವ ನಾಡಿನಲ್ಲಿ ಬದುಕುತ್ತಿರುವ ನಾವು ಸೌಭಾಗ್ಯವಂತರು, ಬಸಣ್ಣನವರು ವಚನ ಸಾಹತ್ಯಕೆ ನೀಡಿದ ಕೊಡುಗೆ ಅಪಾರವಾದದ್ದು ಎಂದರು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಡಾ.ಅನೀಲ ಭಿ.ನಾಯಕ, ಐಕ್ಯೂಎಸಿ ಸಂಯೋಜಕ ಡಾ.ಪಿ.ಎಸ್.ಪಾಟೀಲ, ಡಾ.ಧರ್ಮಗುರು ಪ್ರಸಾದ್, ಪ್ರೊ.ಗುರುರಾಜ್ ಎನ್.ಕುಲಕರ್ಣಿ, ಡಾ.ತರನ್ನುಮ್ ಜಬೀನ ಖಾನ್, ಇನ್ನಿತರ ಮಹಾವಿದ್ಯಾಲಯದ ಬೋಧಕ,ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

