ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಪಟ್ಟಣದಲ್ಲಿ ತಾಲೂಕು ಆಡಳಿತ ಹಾಗೂ ಶರಣ ಸಾಹಿತ್ಯ ಪರಿಷತ್ ವತಿಯಿಂದ ಬಸವಣ್ಣ ಅವರ ೮೯೩ನೇ ಜಯಂತೋತ್ಸವವನ್ನು ಸೋಮವಾರ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಪ್ರಾಸ್ತಾವಿಕವಾಗಿ ಶಿರಸ್ತೇದಾರ್ ಕೃಷ್ಣಾ ಗುಡೂರ ಮಾತನಾಡಿ, ಸಮಾಜದಲ್ಲಿ ಜಾತಿ ವ್ಯವಸ್ಥೆ ಮತ್ತು ಮೂಢನಂಬಿಕೆಗಳನ್ನು ನಿರ್ಮೂಲನೆ ಮಾಡಿ ಸಮಾನತೆಯ ಸಂದೇಶವನ್ನು ತಮ್ಮ ವಚನಗಳ ಮೂಲಕ ಜನರಿಗೆ ತಲುಪಿಸಿದ ಮಹಾನ್ ಚಿಂತಕರಾಗಿದ್ದರು ಎಂದು ಹೇಳಿದರು.
ತಾಲ್ಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಬಾಲಗೊಂಡ ಮಾತನಾಡಿ, ನಮ್ಮ ದಿನನಿತ್ಯದ ಕಾಯಕದಲ್ಲಿ ನಿಷ್ಠೆ, ಶ್ರದ್ಧೆ ಮತ್ತು ಭಕ್ತಿ ಇದ್ದರೆ ಅದುವೇ ಕೈಲಾಸವೆಂಬ ಬಸವಣ್ಣನವರ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಮಲ್ಲಪ್ಪ ಗಣಿ ಅವರು ಸ್ವರಚಿತ ಕವನವನ್ನು ಭಜನಾ ಶೈಲಿಯಲ್ಲಿ ಹಾಡಿ ಕಾರ್ಯಕ್ರಮಕ್ಕೆ ಮೆರುಗು ತಂದರು.
ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಪಿ.ಎಸ್. ಹುಡೇದ, ಗ್ರಾಮ ಲೆಕ್ಕಾಧಿಕಾರಿ ಬಿ.ಎನ್. ಜಿಡ್ಡಿಮನಿ, ಆನಂದ ಇಂಡಿ, ಸಂಜು ಡೋಣೂರ, ಶಿಕ್ಷಕರಾದ ಕೃಷ್ಣಾ ರಜಪುತ, ಗರಸಂಗಿ ಸರ್ ಹಾಗೂ ಚೈತ್ರಾ ದಳವಾಯಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

