ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಶಂಕರಾಚಾರ್ಯರು ಅದ್ವೈತ ವೇದಾಂತದ ಮೂಲಕ ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಿದ ಶ್ರೇಷ್ಠ ಆಧ್ಯಾತ್ಮಿಕ ಸಂತರಾಗಿದ್ದಾರೆ ಎಂದು ಹಿರಿಯ ವೈದ್ಯ ಆರ್.ಆರ್.ನಾಯಿಕ್ ಹೇಳಿದರು.
ತಾಲ್ಲೂಕು ಆಡಳಿತದಡಿಯಲ್ಲಿ ಮಂಗಳವಾರ ಜರುಗಿದ ಆದಿ ಜಗದ್ಗುರು ಶಂಕರಾಚಾರ್ಯರ ೧೨೩೮ ನೇ ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿದರು. ಸಾಂಸ್ಕೃತಿಕ ಮತ್ತು ಧಾರ್ಮಿಕ ಅವನತಿಯ ಸಮಯದಲ್ಲಿ ಹಿಂದೂ ಧರ್ಮದ ಆಶಾಕಿರಣವಾಗಿ ನಿರ್ಣಾಯಕ ಪಾತ್ರ ವಹಿಸಿದ ಜಗದ್ಗುರು ಶಂಕರಾಚಾರ್ಯರು ಭಾರತೀಯ ತತ್ವಶಾಸ್ತçದ ಶ್ರೇಷ್ಠ ವ್ಯಕ್ತಿಯಾಗಿದ್ದರು ಎಂದರು.
ಉಪನ್ಯಾಕ ಗಿರೀಶ ಕುಲಕರ್ಣಿ ಆದಿಜಗದ್ಗುರು ಶಂಕರರ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.
ತಹಶೀಲ್ದಾರ ನಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು.
ನಿವೃತ್ತ ಉಪನ್ಯಾಸಕ ಎಂ.ಆರ್.ಶಿರಸಂಗಿಮಠ, ನಿವೃತ್ತ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಕೆ.ಕುದರಿ, ಕೃಷ್ಣಾಜೀ ಕುಲಕರ್ಣಿ, ಪಿ.ಎಸ್.ಮಿಂಚನಾಳ, ವೆಂಕಟೇಶ ಕುಲಕರ್ಣಿ, ಪ್ರಲ್ಹಾದ ಕುಲಕರ್ಣಿ, ಶ್ರೀಧರ ನಾಡಗೌಡ, ಶ್ರೀಪಾದ ಜೋಷಿ, ಚಿದಂಬರ್ ಕುಲಕರ್ಣಿ(ಹಂಚಲಿ), ಪ್ರವೀಣ ಕುಲಕರ್ಣಿ ಹಾಗೂ ಸಿಬ್ಬಂದಿ ಇದ್ದರು.

