Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
(ರಾಜ್ಯ ) ಜಿಲ್ಲೆ

ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಹೆಚ್ ಡಿ ಕೋಟೆ: ತಾಲೂಕಿನ ಹೈರಿಗೆ ಗ್ರಾಮದಲ್ಲಿ ಶ್ರೀ ರಣದಕಾಳಮ್ಮ ಜಾತ್ರಾ ಮಹೋತ್ಸವ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 135 ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ, ಅರ್ಥಪೂರ್ಣವಾಗಿ ಆಚರಿಸಲಾಯಿತು.
ಜಾತ್ರೆ ಹಾಗೂ ಅಂಬೇಡ್ಕರ್ ಜಯಂತಿ ಮಹೋತ್ಸವ ಹಿನ್ನೆಲೆ ಗ್ರಾಮದ ಬೀದಿಗಳನ್ನು ತಳಿರು ತೋರಣಗಳಿಂದ ಸಿಗರಗೊಳಿಸಲಾಗಿತ್ತು. ಮನೆ ಮುಂದೆ ರಂಗೋಲಿ ಬಿಡಿಸಲಾಗಿತ್ತು. ರಾತ್ರಿ ವೇಳೆ ಪ್ರಮುಖ ಬೀದಿಗಳು ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿದ್ದವು. 3 ದಿನಗಳ ಕಾಲ ನಡೆದ ಈ ಜಾತ್ರಾ ಮಹೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಸ್ಥರು ಆಗಮಿಸಿ, ದೇವಿಯ ಕೃಪೆಗೆ ಪಾತ್ರರಾದರು. ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಕೈಂಕರ್ಯಗಳು ನಡೆದ್ರೆ, ರಾತ್ರಿ ದೇವಿಯನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿಸಲಾಯಿತು. ಸತ್ತಿಗೆ ಸೂರಪಾನಿ, ತಮಟೆ ವಾದ್ಯ, ಅರಮನೆ ಬ್ಯಾಂಡ್ ಸೇರಿದಂತೆ ನಾನಾ ಕಲಾಪ್ರಕಾರಗಳು ಮೆರವಣಿಗೆಗೆ ಮೆರಗು ತಂದವು. ಭಕ್ತರು ರಸ್ತೆ ಇಕ್ಕೇಲುಗಳಲ್ಲಿ ನಿಂತು ದೇವಿಯ ವೈಭೋಗವನ್ನು ಕಣ್ತುಂಬಿಕೊಂಡರು.
ಅಂಬೇಡ್ಕರ್ ಜಯಂತಿ ಹಗು ಜಾತ್ರೆ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಪ್ರಭ, ಶಿವು, ಚಿಲ್ಲರ್ ಮಂಜು ಅವರ ಕಾಮಿಡಿಗೆ ಪ್ರೇಕ್ಷಕರು ಬಿದ್ದು ಬಿದ್ದು ನಗಾಡಿದರು. ಪ್ರಸಾದ್ ಜಾಕಿ ತಂಡದವರಿಂದ ರಸಮಂಜರಿ ಕಾರ್ಯಕ್ರಮ ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಾಡಿಸಿತ್ತು. ಕ್ರಿಕೆಟ್ ಪಂದ್ಯಾವಳಿ ಜೊತೆಗೆ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.

ಅಂಬೇಡ್ಕರ್ ಜಯಂತಿ ಆಚರಣೆ

ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೊದಲು ಶಾಲಾ ಮಕ್ಕಳು ಸಂವಿಧಾನ ಪೀಠಿಕೆ ಓದಿದರು. ಬಳಿಕ ನೆರೆದಿದ್ದ ಗಣ್ಯರು ಸಂವಿಧಾನ ಪೀಠಿಕೆ ವಾಚಿಸುವ ಮೂಲಕ ವಿಶ್ವಜ್ಞಾನಿ ಡಾ. ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಏಪ್ರಿಲ್ 14 ಕೇವಲ ಒಂದು ದಿನಾಂಕವಲ್ಲ. ಅದು ಭಾರತದ ನೆಲದಲ್ಲಿ ಸಮಾನತೆ, ನ್ಯಾಯ ಮತ್ತು ಮಾನವ ಹಕ್ಕುಗಳು ನಿಜಾರ್ಥದಲ್ಲಿ ಮೊಳಕೆಯೊಡೆದ ದಿನ. ಏಪ್ರಿಲ್ 14, 1891ರಂದು ಮಧ್ಯಪ್ರದೇಶದ ಮಹೌ ಅನ್ನೋ ಪ್ರದೇಶದಲ್ಲಿ ಮಹಾರ್ ಎಂಬ ದಲಿತ ಸಮುದಾಯದಲ್ಲಿ ಮಗುವೊಂದರ ಜನನವಾಗುತ್ತೆ. ಆ ಮಗು ಮುಂದೊಮ್ಮೆ ಇಡೀ ಭಾರತದ ಯೋಚನಾ ಲಹರಿಯನ್ನೇ ಬದಲಾಯಿಸಿ, ಇಡೀ ದೇಶವನ್ನೇ ಪ್ರಬುದ್ಧ ರಾಷ್ಟ್ರವನ್ನಾಗಿ ಮಾಡುತ್ತೆ. ಆ ಮಗುವಿನ ಹೆಸರೇ ಡಾ. ಬಾಬಾ ಸಾಹೇಬ್ ಅಂಬೇಡ್ಕರ್. ಇಂದು ನಾವು ನೀವೆಲ್ಲರೂ ಒಟ್ಟುಗೂಡಿ ನಿಂತು ಮಾತನಾಡುತ್ತಿರುವುದಕ್ಕೆ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವೇ ಕಾರಣ. ಹೀಗಾಗಿ ಪ್ರತಿಯೊಬ್ಬರೂ ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಗಣ್ಯರು ಸಲಹೆ ನೀಡಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.