ಬೈಲಹೊಂಗಲ ತಾಲೂಕಿನ ಸರಕಾರಿ ಎಸ್.ಪಿ.ಎಂ ಪದವಿ ಪೂರ್ವ ಕಾಲೇಜ್ ಸಾಧನೆ
ಉದಯರಶ್ಮಿ ದಿನಪತ್ರಿಕೆ
ಬೈಲಹೊಂಗಲ: ತಾಲೂಕಿನ ಸರಕಾರಿ ಎಸ್.ಪಿ.ಎಂ ಪದವಿ ಪೂರ್ವ ಕಾಲೇಜಿನ ಫಲಿತಾಂಶ 100 ಕ್ಕೆ 100 ರಷ್ಟು ಸಾಧನೆ ಮಾಡಿದೆ.
ಪರೀಕ್ಷೆಗೆ ಕುಳಿತ ಒಟ್ಟು 46 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 30 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ವ್ಯವಹಾರ ಅಧ್ಯಯನ ವಿಷಯದಲ್ಲಿ-5, ಇತಿಹಾಸ-2, ಅರ್ಥಶಾಸ್ತ್ರ, ಕನ್ನಡ, ಸಮಾಜಶಾಸ್ತ್ರ ವಿಷಯಗಳಲ್ಲಿ ತಲಾ ಒಬ್ಬ ವಿದ್ಯಾರ್ಥಿ 100 ಅಂಕಗಳಿಸುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಿತ್ತೂರಿನ ಶಾಸಕ ಬಾಬಾಸಾಹೇಬ ದೇ ಪಾಟೀಲ ಇವರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಜಿ.ಕೆ.ಸಂಬಣ್ಣವರ ಹಾಗೂ ಉಪನ್ಯಾಸಕರು ಮತ್ತು ಕಾ.ಆ.ಸಮೀತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.

