ಇಂಡಿಯಲ್ಲಿ ನಗರಾಭಿವೃದ್ದಿ ಪ್ರಾಧಿಕಾರ ಕಚೇರಿ ಉದ್ಘಾಟಿಸಿದ ಶಾಸಕ ಯಶವಂತರಾಯಗೌಡ ಪಾಟೀಲ ಸಲಹೆ
ಉದಯರಶ್ಮಿ ದಿನಪತ್ರಿಕೆ
ಇಂಡಿ: ಇಂಡಿ ನಗರದ ಅಭಿವೃದ್ದಿಗಾಗಿ ಕೆಲಸ ಮಾಡುವ ಸಂಸ್ಥೆ ಇಂಡಿ ನಗರಾಭಿವೃದ್ದಿ ಪ್ರಾಧಿಕಾರ, ಅದರ ಪ್ರಯೋಜನ ಪಡೆದು ಕಾರ್ಯ ರೂಪಿಸಿ ಇಂಡಿ ನಗರ ಅಭಿವೃದ್ದಿ ಪಡಿಸುವ ಗುರಿಯಾಗಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಅವರು ನಗರದ ಆಡಳಿತ ಸೌಧದ ಮೂರನೇಯ ಮಹಡಿಯಲ್ಲಿ ಇಂಡಿ ನಗರಾಭಿವೃದ್ದಿ ಪ್ರಾಧಿಕಾರ ಕಚೇರಿ ಉದ್ಘಾಟಿಸಿ ಮಾತನಾಡಿದರು.
ಇಂಡಿ ನಗರದ ಅಭಿವೃದ್ದಿಗೆ ಇಂಡಿ ಅಭಿವೃದ್ದಿ ಪ್ರಾಧಿಕಾರ ಮತ್ತು ಇಂಡಿ ನಗರಸಭೆ ಕಾರ್ಯನಿರ್ವಹಿಸುತ್ತವೆ ಎಂದರು.
ಇಂಡಿ ಅಭಿವೃದ್ದಿ ಪ್ರಾಧಿಕಾರದ ನೂತನ ಅಧ್ಯಕ್ಷ ಅಜೀತ ಧನಶೆಟ್ಟಿ ಮಾತನಾಡಿ, ನಗರಗಳ ವ್ಯವಸ್ಥಿತ ಬೆಳವಣೆಗೆಗೆ ಯೋಜನೆ ಸಿದ್ದಪಡಿಸುವದು ಮತ್ತು ಅನುಷ್ಠಾನಗೊಳಿಸುವದು ಉದ್ದೇಶವಾಗಿದೆ. ಅಭಿವೃದ್ದಿ ಪಡಿಸಿದ ಪ್ರದೇಶಗಳಲ್ಲಿ ರಸ್ತೆ ನೀರು ಸರಬರಾಜು ಒಳಚರಂಡಿ ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸುವದು ನಮ್ಮ ಗುರಿಯಾಗಿದೆ ಎಂದರು. ಇಂಡಿ ನಗರದ ವ್ಯವಸ್ಥಿತ ಅಭಿವೃದ್ದಿ ವಸತಿ ಯೋಜನೆಗಳು ಮತ್ತು ಮೂಲಸೌಕರ್ಯ ಮಾಡುವ ಉದ್ದೇಶ ಹೊಂದಿದೆ. ಶಾಸಕರು ನಮ್ಮನ್ನು ಈ ಪ್ರಾಧಿಕಾರಕ್ಕೆ ನೇಮಕ ಮಾಡಲು ಶ್ರಮಿಸಿದ್ದು ಅವರ ಉದ್ದೇಶ ಈಡೇರಿಸುವ ಕಾರ್ಯ ನಾವೆಲ್ಲರೂ ಕೂಡಿ ಮಾಡುತ್ತೇವೆ. ನಗರದ ಅಭೀವೃಧ್ಧಿಯ ದೃಷ್ಠಿಕೋನ ಒಂದೇ ನಮ್ಮ ಮುಂದಿರುವ ಗುರಿ ಎಂದರು.
ಇದೇ ವೇಳೆ ನೂತನ ಅಧ್ಯಕ್ಷರಾಗಿ ಅಜೀತ ಧನಶೆಟ್ಟಿ, ಸದಸ್ಯರಾಗಿ ಚನ್ನಪ್ಪ ಮಲ್ಲಪ್ಪ ಬೋಡಿ, ರವೀಂದ್ರ ನಿಗಡಿ, ದತ್ತಾತ್ರೇಯ ಜೋಶಿ ಅಧಿಕಾರ ಸ್ವೀಕರಿಸಿದರು.
ಜಿಲ್ಲಾಧಿಕಾರಿ ಕೆ.ಆನಂದ, ಪೌರಾಯುಕ್ತ ಶಿವಾನಂದ ಪೂಜಾರಿ, ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಕೃಷಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಇಲಿಯಾಸ ಬೋರಾಮಣಿ, ವಕೀಲರ ಸಂಘದ ಅಧ್ಯಕ್ಷ ಸಿದ್ದಣ್ಣ ಬೂದಿಹಾಳ, ಅಶೋಕ ಗಜಾಕೋಶ, ಸಂದೀಪ ಧನಶೆಟ್ಟಿ, ಶಾಂತುಗೌಡ ಬಿರಾದಾರ, ಶ್ರೀಕಾಂತ ಕುಡಿಗನೂರ, ಸತೀಶ ಕುಂಬಾರ ಮತ್ತಿತರರಿದ್ದರು.
ನೂತನ ಅಧಕ್ಷರಾಗಿ ಆಯ್ಕೆಯಾದ ಅಧ್ಯಕ್ಷ ಮತ್ತು ಸದಸ್ಯರನ್ನು ವಿವಿಧ ಸಂಸ್ಥೆಗಳು ಮತ್ತು ಗಣ್ಯರು ಸನ್ಮಾನಿಸಿದರು.

