ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ವರನಟ ಡಾ. ರಾಜ್ ಕುಮಾರ್ ಅವರ ಜನ್ಮ ದಿನಾಚರಣೆ ಹಾಗೂ ಅವರ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮವನ್ನು ಇದೇ ಶುಕ್ರವಾರ, ಏಪ್ರಿಲ್.೨೪ರ ಬೆಳಿಗ್ಗೆ ೯ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ–೨ ಹಾಗೂ ಶಾಸಕರಾದ ಪ್ರಕಾಶ ಬಿ. ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್. ನಾಡಗೌಡ, ಸಂಸದರಾದ ರಮೇಶ ಜಗಜಿಣಗಿ ಹಾಗೂ ಸುಧಾ ಮೂರ್ತಿ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಬಿ.ಎಸ್.ಕವಲಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್. ಪೂಜಾರ, ಕೇಶವ ಪ್ರಸಾದ ಎಸ್, ಮಹಾನಗರ ಪಾಲಿಕೆಯ ಮಹಾಪೌರರಾದ ಮಡಿವಾಳಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಗಂಗಾಧರ ಎಸ್ ಸಂಬಣ್ಣಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪತ್ರಕರ್ತರಾದ ಅಶೋಕ ಯಡಳ್ಳಿ ಹಾಗೂ ಪರಶುರಾಮ ಭಾಸಗಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಡಾ.ರಾಜ್ ಕುಮಾರ್ ಅಭಿನಯದ ಚಲನಚಿತ್ರ ಗೀತೆಗಳ ಗಾಯನ ಏರ್ಪಡಿಸಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ. ಪ್ರಸ್ತುತಪಡಿಸುವ ಹಾಡುಗಳ ಮಾಹಿತಿಯನ್ನು ಮೊ: ೯೦೪೯೪೯೯೭೮೩ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

